ಇಂದು ಉಪನ್ಯಾಸ (ಸುದ್ದಿ ಸಂಕ್ಷೇಪ)
ಗದಗ: ಗದಗ ಜಿಲ್ಲಾ ಕಸಾಪ ವತಿಯಿಂದ ಸಾಹಿತ್ಯ ಸಂಜೆ ಕಾರ್ಯಕ್ರಮದ ಉಪನ್ಯಾಸ ಫೆ. 16ರ ಸಂಜೆ 6ಗಂಟೆಗೆ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆಯಲಿದೆ. ಕವಿರಾಜಮಾರ್ಗ ಕೃತಿ ಕುರಿತು ಮುಂಡರಗಿಯ ಕೆ.ಆರ್. ಬೆಲ್ಲದ ಕಾಲೇಜಿನ ಪ್ರೊ. ಆರ್.ಎಲ್. ಪೊಲೀಸ್ಪಾಟೀಲ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ವಹಿಸುವರು. ಧರ್ಮೇಂದ್ರ ಇಟಗಿ ಕವನ ವಾಚಿಸಲಿದ್ದಾರೆ. ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಕಾರ್ಯಕಾರಿಣಿ ಸಭೆ
ಗದಗ: ಗದಗ ತಾಪಂ ಕಚೇರಿ ಆವರಣದಲ್ಲಿರುವ ಗದಗ ಜಿಲ್ಲಾ ಕಸಾಪ ಕಚೇರಿಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಫೆ. 16 ರ ಸಂಜೆ 4ಕ್ಕೆ ಕರೆಯಲಾಗಿದೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ವಹಿಸುವರು. ಮುಂಬರುವ ಮಾರ್ಚ್ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಪೂರ್ವ ಸಿದ್ಧತೆಯೂ ಸೇರಿದಂತೆ ವಿವಿಧ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಚರ್ಚಿಸಲಾಗುವುದು ಜಿಲ್ಲಾ ಕಸಾಪ ಪದಾಧಿಕಾರಿಗಳು, ಸಲಹಾ ಮಂಡಳಿಯ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲ ತಾಲೂಕು ಘಟಕಗಳ ಗೌರವ ಕಾರ್ಯದರ್ಶಿಗಳು, ಕೋಶಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶರಣು ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಬಿಜೆಪಿ ಕಾರ್ಯಕರ್ತರ ಸಭೆ
ಮುಂಡರಗಿ: ಮಾರ್ಚ್ 7ರಂದು ಪುರಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆಯನ್ನು ಫೆ. 16 ರಂದು ಹೆಸರೂರ ರಸ್ತೆಯಲ್ಲಿರುವ ಹಂಚಿನಾಳ ಅವರ ಸ್ವಿಮಿಂಗ್ಪೂಲ್ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಶಿರಹಟ್ಟಿ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ವಹಿಸುವರು. ತಾಲೂಕಿನ ಬಿಜೆಪಿ ಮುಖಂಡರು, ಪುರಸಭೆ ಬಿಜೆಪಿ ಸದಸ್ಯರು ಹಾಗೂ ಪುರಸಭೆ ವ್ಯಾಪ್ತಿಯ ಎಲ್ಲ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆಗೆ ಆಗಮಿಸಿ, ಸಲಹೆ ಸೂಚನೆ ನೀಡಬೇಕೆಂದು ಬಿಜೆಪಿ ಶಹರ ಘಟಕದ ಅಧ್ಯಕ್ಷ ರಜನೀಕಾಂತ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವಾರ್ಷಿಕ ಸ್ನೇಹ ಸಮ್ಮೇಳನ
ಮುಂಡರಗಿ: ಪಟ್ಟಣದ ಎಸ್.ಎಸ್. ಪಾಟೀಲ ನಗರದಲ್ಲಿರುವ ಎಸ್.ಎಫ್.ಎಸ್. ಶಾಲೆಯ 12ನೇ ವರ್ಷದ ಶಾಲಾ ವಾರ್ಷಿಕೋತ್ಸವ ಫೆ.16 ರ ಸಂಜೆ 5.15ಕ್ಕೆ ಜರುಗಲಿದೆ. ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಎ.ಟಿ. ನೆರೇಗಲ್, ಬಿಇಓ ಎಂ.ಎ. ರಡ್ಡೇರ ಆಗಮಿಸಲಿದ್ದು, ಬೆಳಗಾವಿಯ ಡಾ. ಪೀಟರ್ ಮಟಾಡೋ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವಿದ್ಯಾರ್ಥಿಗಳು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21ರಂದು ಶಿಕ್ಷಣ ಅದಾಲತ್
ಮುಂಡರಗಿ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಆದೇಶದ ಮೇರಗೆ ಫೆ. 21ರಂದು ಮುಂಡರಗಿ ತಾಲೂಕಿನ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಮುಂಡರಗಿ ಪಟ್ಟಣದಲ್ಲಿರುವ ಜೆ.ಟಿ. ಕೋಟೆ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರ ಹಾಗೂ ಶಿಕ್ಷಕರ ಸೇವಾ ಸಮಸ್ಯೆಗಳು ಇದ್ದಲ್ಲಿ ತಮ್ಮ ಮನವಿಗಳನ್ನು ಫೆ. 18ರ ಒಳಗಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸಲ್ಲಿಸಬೇಕೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

