ವಿದ್ಯುತ್ ಪೂರೈಸಿ: ಮಹಿಳೆಯರ ಪ್ರತಿಭಟನೆ
ಶಿರಹಟ್ಟಿ: ತಾಲೂಕಿನ ಛಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜ್ಜೂರ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು, ಕೂಡಲೇ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ. ವಿದ್ಯುತ್ತಿಲ್ಲದೆ ನಿತ್ಯ ಕತ್ತಲಲ್ಲೇ ಕಾಲ ಕಳೆಯುತ್ತಿದ್ದು, ಅಧಿಕಾರಿಗಳ ಬೇಜವಾಬ್ದಾರಿ ಖಂಡಿಸಿ ಮಂಗಳವಾರ ಮಹಿಳೆಯರು ಪಟ್ಟಣದ ಹೆಸ್ಕಾಂ ಕಾರ್ಯಾಲಯದ ಬಾಗಿಲು ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಪಂ ಸದಸ್ಯ ಪ್ರಕಾಶ ಮಾಂಡ್ರೆ, ಮುಖಂಡ ಶಿವನಗೌಡ ಪಾಟೀಲ ಮಾತನಾಡಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಹೆಸ್ಕಾಂ ಅಧಿಕಾರಿಗಳ ಗಮನ ಸೆಳೆದರೂ ಗ್ರಾಮಕ್ಕೆ ಭೇಟಿ ನೀಡಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಮುಂದಾಗಿಲ್ಲ. ಪರೀಕ್ಷೆ ಸಮೀಪಿಸುತ್ತಿದ್ದು, ಮಕ್ಕಳ ಓದಿಗೂ ತೀವ್ರ ತೊಂದರೆಯಾಗಿದೆ ಎಂದು ದೂರಿದರು. ವಿದ್ಯುತ್ ಇಲ್ಲದೆ ಇಡೀ ಗ್ರಾಮವೇ ಕತ್ತಲಲ್ಲಿದೆ. ರಾತ್ರಿ ಮಹಿಳೆಯರು, ಮಕ್ಕಳು ಹೊರಗಡೆ ಸಂಚರಿಸುವುದು ಕಷ್ಟವಾಗಿದೆ. ಈ ಬಾರಿ ಮಳೆಯೂ ಆಗದೆ ವಿಪರೀತ ಸೆಕೆ ಕಾಣಿಸಿದ್ದು, ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಹೀಗಾಗಿ, ಜನತೆ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಗ್ರಾಮದಲ್ಲಿ ಹೆಸ್ಕಾಂ ಒಂದೇ ಟಿಸಿ ಹಾಕಿದ್ದು, ಹೆಚ್ಚಿಗೆ ಲೋಡ್ ಬೀಳುವುದರಿಂದ ಮೇಲಿಂದ ಮೇಲೆ ಸುಡುತ್ತಿದೆ. ಇನ್ನೊಂದು ಟಿಸಿ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾಮದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದ್ದು, ರೈತರ ನೀರಾವರಿ ಬೆಳೆಗಳು ವಿದ್ಯುತ್ ಸಮಸ್ಯೆಯಿಂದಾಗಿ ಒಣಗುತ್ತಿವೆ. ಸಮರ್ಪಕ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಸುಟ್ಟಿರುವ ಟಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವೇ ಖಾಸಗಿಯಾಗಿ ರಿಪೇರಿ ಮಾಡಿಸಿಕೊಳ್ಳಲು ಪರವಾನಿಗೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಜಾನಬಿ ವಾಲೀಕಾರ, ಶಮಶಾನ ಬರದೂರ, ಶಮಶಾನ ಅಣ್ಣಿಗೇರಿ, ನೂರಜಾನಬಿ ಅಂಕಲಿಯವರ, ಅನಸವ್ವ ಹರಿಜನ, ಶಹನಾಜ ಬರದೂರ, ಲಕ್ಷ್ಮಣ ಹಡಪದ, ಮಂಜುನಾಥ ಕರಿಗಾರ, ಬಾಶೇಸಾಬ ಜಂಗಲಿ, ಬಸವರಾಜ ಮುಂಡವಾಡ, ಗಂಗಾಧರ ದೊಡಮನಿ ಪ್ರತಿಭಟನೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

