ಗದಗ

ಕೆರೆಗಳಿಗೆ ಕಾಲುವೆ ನೀರು ತುಂಬಿಸಿ: ಆಗ್ರಹ

Published On :

ಹಿರೇಕೆರೂರು: ತಾಲೂಕಿನ ಎಲ್ಲ ಕೆರೆಗಳಿಗೆ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಿಂದ ನೀರು ತುಂಬಿಸಬೇಕು. ಈ ಮೂಲಕ ತಾಲೂಕಿನ ಕುಡಿಯುವ ನೀರಿನ ಬವಣೆ ನೀಗಿಸಲು ಸಾಧ್ಯ ಎಂದು ಶ್ರೀಮದ್ ಸಾಧು ಸದ್ಧರ್ಮ ವೀರಶೈವ ತಾಲೂಕು ಘಟಕ ಸರ್ವನುಮತದಿಂದ ನಿರ್ಣಯ ಕೈಗೊಂಡಿದೆ.
ತಾಲೂಕಿನ ರಟ್ಟಿಹಳ್ಳಿಯ ಶಾಂತಿಧಾಮದಲ್ಲಿ ಸಮಾಜದ ಅಧ್ಯಕ್ಷ ಲಿಂಗರಾಜ ಚಪ್ಪರದಳ್ಳಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ತುಂಗಾ ಮುಖ್ಯ ಕಾಲುವೆಯಿಂದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಿದರೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚುತ್ತದೆ. ಆಗ ಕುಡಿಯುವ ನೀರಿನ ಬವಣೆ ನೀಗಿಸಲು ಸಾಧ್ಯ ಎಂಬ ಅಭಿಪ್ರಾಯಕ್ಕೆ ಸಹಮತ ವ್ಯಕ್ತವಾಯಿತು. ಈ ಕಾರ್ಯಕ್ಕೆ ಸರ್ಕಾರ ತಕ್ಷಣ ಮುಂದಾಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದೂ ಸಭೆ ಎಚ್ಚರಿಸಿತು.
ಸಭೆಯಲ್ಲಿ 12ನೇ ಶತಮಾನದ ಮಹಾ ಮಾನವತಾವಾದಿ ಬಸವಣ್ಣನವರ 1000ನೇ ಜಯಂತ್ಯುತ್ಸವವನ್ನು ರಟ್ಟಿಹಳ್ಳಿ ಗ್ರಾಮದಲ್ಲಿ ಮೇ 13ರಂದು ಅದ್ಧೂರಿಯಾಗಿ ಆಚರಿಸಲಾಗುವುದು. ಅಂದು ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಜಯಂತ್ಯುತ್ಸ ಆಚರಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ  ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಯು.ಬಿ. ಬಣಕಾರ, ಸಮಾಜದ ಮುಖಂಡ ಎಸ್.ಎಸ್. ಪಾಟೀಲ, ಎಸ್.ಬಿ. ತಿಪ್ಪಣ್ಣನವರ, ಮಹೇಂದ್ರ ಬಡಳ್ಳಿ, ಯು. ಬಣಕಾರ, ಆರ್.ಎನ್. ಗಂಗೋಳ, ಬಿ.ಎಸ್. ಸಣ್ಣಗೌಡ್ರ, ಪ್ರಕಾಶಗೌಡ ಪಾಟೀಲ, ರವಿ ಮುದಿಯ್ಪಪನವರ, ತಾಲೂಕು ಘಟಕದ ಕಾಯಂದರ್ಶಿ ಎಸ್.ಬಿ. ಚೆನ್ನಗೌಡ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.