ಗ್ರಾಮೀಣಾಭಿವೃದ್ಧಿಯಲ್ಲಿ 2ನೇ ಸ್ಥಾನ: ಲಮಾಣಿ
ಲಕ್ಷ್ಮೇಶ್ವರ: ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಯಲ್ಲಿ ಶಿರಹಟ್ಟಿ ತಾಲೂಕು ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಸರ್ಕಾರದ ವರದಿಗಳು ತಿಳಿಸಿದ್ದು, ಶಿರಹಟ್ಟಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಈಚೆಗೆ ಅವರು ಸಮೀಪದ ಪು. ಬಡ್ನಿ ಗ್ರಾಮದಲ್ಲಿ ಪು. ಬಡ್ನಿ ಹಾಗೂ ಹಿರೇಮಲ್ಲಾಪುರ ರಸ್ತೆ ಮೇಲ್ದರ್ಜೆಗೆ ಏರಿಸಲು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಒಟ್ಟು 13,500 ಆಶ್ರಯ ಮನೆಗಳನ್ನು ನಮ್ಮ ಅವಧಿಯಲ್ಲಿ ವಿತರಣೆ ಮಾಡಲಾಗಿದೆ. ತಾಲೂಕಿನಾದ್ಯಂತ 20ಕ್ಕೂ ಹೆಚ್ಚು ಬ್ಯಾರೇಜುಗಳನ್ನು ನಿರ್ಮಾಣ ಮಾಡಲಾಗಿದೆ. 8ಕ್ಕೂ ಹೆಚ್ಚು ಬ್ರಿಡ್ಜ್ ಕಮ್ ಬ್ಯಾರೇಜುಗಳನ್ನು ನಿರ್ಮಾಣ ಮಾಡಲಾಗಿದೆ. 7 ಮೇಲ್ಸೇತುವೆಗಳ ನಿರ್ಮಾಣ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎನ್. ಪಾಟೀಲ್, ಗ್ರಾಪಂ ಮಾಜಿ ಅಧ್ಯಕ್ಷ ಶೇಖಣ್ಣ ಕರಿಯಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಮಾಜಿ ಸದಸ್ಯ ಸುಭಾಷ ಬಟಗುರ್ಕಿ, ಚಂದ್ರಶೇಖರ ಲಮಾಣಿ, ಗ್ರಾಪಂ ಅಧ್ಯಕ್ಷೆ ಶಾಂತವ್ವ ಮುಂದಿನಮನಿ, ಉಪಾಧ್ಯಕ್ಷ ಮುನಾಫಸಾಬ ಗಾಡಗೋಳಿ, ಫಕ್ಕೀರವ್ವ ಮಾದರ, ಕಲ್ಲಪ್ಪ ಹಡಪದ, ಶಿವಾನಂದ ಅಗಸಿಬಾಗಿಲ, ಗ್ರಾಪಂ ಸದಸ್ಯ ಶಿವಪುತ್ರಪ್ಪ ಚೋಟಗಲ್, ಮತ್ತಣ್ಣ ಚೋಟಗಲ್, ನಿಂಗಪ್ಪ ಜಂತ್ಲಿ, ವಿರಬಸಪ್ಪ ಜಿಡ್ಡಿ, ಚೆನ್ನಯ್ಯ ಕಳ್ಳಿಮಠ, ಹಸನಸಾಬ ಯಳವತ್ತಿ, ಹನುಮಂತಪ್ಪ ಹರ್ತಿ, ಎಂ.ಎಸ್. ಪಾಟೀಲ, ಜಗದೀಶ ಪಾಟೀಲ, ಶಿವಪ್ರಕಾಶಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

