ಒತ್ತಾಯದ ವಿದ್ಯಾಭ್ಯಾಸ ಸಮಂಜಸವಲ್ಲ
ಗದಗ: ಪರಮಾದ್ಭುತ ಗುರು ದೊರೆತಾಗ ಅದ್ಭುತ ಶಿಷ್ಯ ಪರಂಪರೆ ನಿರ್ಮಾಣವಾಗುತ್ತದೆ ಎಂದು ಗದಗ ಜಿಲ್ಲಾ ಅಪರಾಧ ನಿಷೇಧ ಘಟಕದ ಡಿಎಸ್ಪಿ ಅನಿತಾ ಹದ್ದಣ್ಣವರ ಹೇಳಿದರು.
ಈಚೆಗೆ ಅವರು ಸ್ಥಳೀಯ ಭಾರತೀಯ ಶಿಕ್ಷಣ ಸಂಸ್ಥೆಯ ಬಿಪಿನ್ ಚಿಕ್ಕಟ್ಟಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ 2012-13ನೇ ಸಾಲಿನ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ಪಾಲಕರು ತಮ್ಮ ಮಕ್ಕಳಿಗೆ ಒತ್ತಾಯ ಪೂರ್ವಕವಾದ ವಿದ್ಯಾಭ್ಯಾಸ ನೀಡುತ್ತಿದ್ದಾರೆ. ಇದು ಸಮಂಜಸವಾದುದಲ್ಲ. ಬದಲಾಗಿ ಆಸಕ್ತಿಗೆ ತಕ್ಕಂತೆ ಅವರಿಗೆ ಜೀವನ ರೂಪಿಸಿಕೊಳ್ಳಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರು ತಮ್ಮ ಮಕ್ಕಳ ಕಲಿಕೆಯ ಜತೆಗೆ ಅವರಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಗುರುತಿಸುವ ಮೂಲಕ ಪ್ರೋತ್ಸಾಹಿಸುವುದು ಅವಶ್ಯಕವಾಗಿದೆ ಎಂದರು.
ಜಿಲ್ಲಾ ಗ್ರಾಹಕ ನ್ಯಾಯಾಲಯದ ಸದಸ್ಯ ಎಫ್.ಪಿ. ಲಕ್ಷ್ಮೇಶ್ವರಮಠ, ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಎಲ್.ಡಿ. ಮೇರವಾಡೆ ಮಾತನಾಡಿದರು. ಸಂಸ್ಥೆಯ ಬಾಲ ಪ್ರತಿಭೆಗಳಿಗೆ ಸನ್ಮಾನಿಸಲಾಯಿತು. ಬೆಳಗಾವಿ ವಿಭಾಗ ಮಟ್ಟದ ಉತ್ತಮ ಸಿಆರ್ಪಿ ಪ್ರಶಸ್ತಿ ಪಡೆದ ಶಿವಾನಂದ ಗಿಡ್ನಂದಿ ಹಾಗೂ ಡೈ. ರಾಘವೇಂದ್ರ ಕುಬೇರ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಎಸ್.ವೈ. ಚಿಕ್ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾರದಾ ದೇಸಾಯಿ ಪ್ರಾರ್ಥಿಸಿದರು. ಪ್ರೊ. ಸಂಧ್ಯಾ ನಾಯಕ ಸ್ವಾಗತಿಸಿದರು. ಸೌಮ್ಯ ಬದಾಮಿ ನಿರೂಪಿಸಿದರು. ಅನ್ನಪೂರ್ಣ ಮಾಕಾಪುರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

