ಗದಗ

ವಿದ್ಯಾರ್ಥಿ ಜೀವನ ಅಮೂಲ್ಯ: ಗುರಿಕಾರ

Published On :

ಕನ್ನಡಪ್ರಭ ವಾರ್ತೆ, ನರೇಗಲ್ಲ, ಫೆ. 24
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಅದನ್ನು ಉತ್ತಮವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಪ್ರಾಚಾರ್ಯ ಡಾ. ಎಸ್.ಜಿ. ಗುರಿಕಾರ ಹೇಳಿದರು.
ಈಚೆಗೆ ಅವರು ಸ್ಥಳೀಯ ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ 6ನೇ ವಾರ್ಷಿಕೋತ್ಸವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳನ್ನು ಬೀಳ್ಕೊಡುವ ಹಾಗೂ ಪ್ರತಿಭಾವಂತರಿಗೆ ಸನ್ಮಾನಿಸುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅಧ್ಯಯನಶೀಲತೆ ನಿಮ್ಮ ಜೀವನದ ಮುಖ್ಯ ಗುರಿಯಾಗಿರಲಿ. ಉಜ್ವಲ ಭವಿಷ್ಯ ನಿರ್ಮಾಣ ಮಾಡಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಓದಿನಲ್ಲಿ ನಿರಂತರ ತಲ್ಲೀನರಾಗಿ ನಿಯಮಿತ ಅವಧಿಯನ್ನು ಅಳವಡಿಸಿಕೊಂಡು ಅಧ್ಯಯನ ಶೀಲರಾದಲ್ಲಿ ಪ್ರತಿಫಲ ಸಿಗುತ್ತದೆ. ನಿಮ್ಮ ಕ್ಷೇತ್ರದಲ್ಲಿ ನೀವು ದೊಡ್ಡ ಸಾಧನೆ ಮಾಡಿದಲ್ಲಿ ಸನ್ಮಾನಗಳು ನಿಮ್ಮನ್ನು ಹುಡುಕಿಕೊಂಡು ಮನೆ ಬಾಗಿಲಿಗೆ ಬರುತ್ತವೆ ಎಂದರು.
ಉಪನ್ಯಾಸಕ ಶಿವಾನಂದ ಗೊಗೇರಿ, ಶಿಕ್ಷಕ ಅರುಣ ಕುಲಕರ್ಣಿ, ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ಮೃತ್ಯುಂಜಯ ಧಡೇಸೂರಮಠ, ಶಿಕ್ಷಕ ವೀರಭದ್ರಪ್ಪ ಕುಂಬಾರ, ಶಿಕ್ಷಕ ಎಂ.ಕೆ. ಬೇವಿನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ರಂಗಗಳಲ್ಲಿ ಸಾಧನೆಗೈದವರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
 ನಾಗರಾಜ ಬಡಿಗೇರ ಸ್ವಾಗತಿಸಿದರು. ಮಮತಾ ಕುಲಕರ್ಣಿ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ನಿಂಗರಾಜ ಬೇವಿನಕಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.