ಗದಗ

ಜನತೆ ಜೆಡಿಎಸ್ ಬೆಂಬಲಿಸಲಿದ್ದಾರೆ

Published On :

ಗಜೇಂದ್ರಗಡ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದ ಜನತೆ ರೋಸಿ ಹೋಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಜೆಡಿಎಸ್ ಬೆಂಬಲಿಸಲಿದ್ದಾರೆಂದು ರೋಣ ಮತಕ್ಷೇತ್ರದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಹೇಳಿದರು. ಅವರು ಶನಿವಾರ ಸ್ಥಳೀಯ ತಮ್ಮ ನಿವಾಸದಲ್ಲಿ ಬಿಜೆಪಿ ತೊರೆದ ಪುರಸಭೆಯ ಮಾಜಿ ಉಪಾಧ್ಯಕ್ಷ ಅಫಜಲ್‌ಖಾನ್ ಲೋದಿ ಹಾಗೂ ಕಾಂಗ್ರೆಸ್ ತೊರೆದ ಪುರಸಭೆಯ ಮಾಜಿ ಸದಸ್ಯೆ ಸಾವಿತ್ರಿಬಾಯಿ ನಿಂಬಾಳ್ಕರ್ ಅವರನ್ನು ಜೆಡಿಎಸ್‌ಗೆ ಬರಮಾಡಿಕೊಂಡು ಮಾತನಾಡಿದರು.
ಎಚ್.ಡಿ. ಕುಮಾರಸ್ವಾಮಿಯವರು ಕೇವಲ 20 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನತೆಗೆ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಯಂತಹ ವಿನೂತನ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಯುವ ಶಕ್ತಿಗಳು ಕುಮಾರಸ್ವಾಮಿಯವರ ನಾಯಕತ್ವದ ಮೇಲೆ ವಿಶ್ವಾಸ ಹೊಂದಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ರೋಣ ಮತಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಥಳೀಯ ಮತ್ತು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದರು. ರಾಜ್ಯ ಯುವ ಉಪಾಧ್ಯಕ್ಷ ಡಾ. ಮಂಜುನಾಥ ವಿಶ್ವಬ್ರಾಹ್ಮಣ, ಮಕ್ತುಂಸಾಬ್ ಸಾಗರ, ಉಮೇಶ ಮಲ್ಲಾಪುರ, ಬಸವರಾಜ ಕೊಟಗಿ, ಸಂಗಪ್ಪ ಯಲಬುಣಚಿ, ಬಸವರಾಜ ಮಾಳೋತ್ತರ, ರಾಜು ಹಣಗಿ, ರವಿ ಚಂಗಳಿ, ಪಕ್ರುಸಾಬ್ ಕಾತರಕಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.