ಗದಗ

ನಗುವಿನಿಂದ ನೆಮ್ಮದಿ: ಸಾಲಿಮಠ

Published On :

ಗದಗ: ನಗುವಿನಿಂದ  ನೆಮ್ಮದಿ, ಸಂತೋಷ ದೊರೆಯುವುದು ಎಂದು ದೂರದರ್ಶನದ ಹಾಸ್ಯ ಭಾಷಣಗಾರ್ತಿ ಇಂದುಮತಿ ಸಾಲಿಮಠ ಹೇಳಿದರು.
ಈಚೆಗೆ ಅವರು ತಾಲೂಕಿನ ಬಳಗಾನೂರಿನಲ್ಲಿ ಚಿಕೇನಕೊಪ್ಪ ಚನ್ನವೀರ ಶರಣರ 18ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಸ್ಥಳೀಯ ಚನ್ನಮ್ಮ ಶಿಕ್ಷಣ ಮತ್ತು ವಿವಿಧೋದ್ದೇಶಗಳ ಸೇವಾ ಸಂಸ್ಥೆ ಬಳಗಾನೂರು ಇವರ ಆಶ್ರಯದಲ್ಲಿ ನಡೆದ ನಗೆ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.  ಡಾ. ಆರ್.ಎಸ್. ದಾನರೆಡ್ಡಿ, ಮಂಜುನಾಥ ಬೊಮ್ಮನಕಟ್ಟಿ ಮಾತನಾಡಿದರು.  ಶ್ರೀಮಠದ ಶಿವಶಾಂತವೀರ ಶ್ರೀಗಳು ಆಶೀರ್ವಚನ ನೀಡಿದರು.  ಸಂಸ್ಥೆಯ ವತಿಯಿಂದ ಅತಿಥಿಗಳನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಪ್ರೊ. ಹನುಮಂತಗೌಡ ಕಲ್ಮನಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ.ಎ. ಪಾಟೀಲ, ವಿದ್ಯಾ ಕಂಪ್ಲಿ, ಪ್ರಭುರಾಜಗೌಡ ಪಾಟೀಲ, ಮಲ್ಲು ಗೊಲ್ಲರ ಮುಂತಾದವರು ಉಪಸ್ಥಿತರಿದ್ದರು. ಪ್ರೊ. ವಿ.ಬಿ. ಕರಮುಡಿ ನಿರೂಪಿಸಿದರು. ಪ್ರೊ. ಪ್ರಕಾಶ ಗಾಣಿಗೇರ ವಂದಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.