ಕುಡಿಯುವ ನೀರು, ವಿದ್ಯುತ್ಗೆ ಆಗ್ರಹ
ಶಿರಹಟ್ಟಿ: ಛಬ್ಬಿ ಗ್ರಾಪಂ ವ್ಯಾಪ್ತಿಯ ವರವಿ ಗ್ರಾಮದ ನಿವಾಸಿಗಳು ಸಮರ್ಪಕ ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮಂಗಳವಾರ ಛಬ್ಬಿ ಗ್ರಾಪಂ ಎದುರು ಪ್ರತಿಭಟನೆ ನಡೆಸಿ, ನಂತರ ಪಟ್ಟಣದ ತಾಪಂ ಇಓಗೆ ಮನವಿ ಸಲ್ಲಿಸಿದರು.
4 ತಿಂಗಳಿಂದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಗ್ರಾಮಸ್ಥರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಗ್ರಾಪಂ ಸದಸ್ಯ ಗಂಗಾಧರ ಶೆಟ್ಟಿಕೇರಿ, ಪಕ್ಕವ್ವ ಕಜ್ಜಿ ಮಾತನಾಡಿ, ಗ್ರಾಮದಲ್ಲಿರುವ 3 ಕೊಳವೆ ಬಾವಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಜನತೆ ತೀವ್ರ ನೀರಿನ ತೊಂದರೆ ಆನುಭವಿಸುವಂತಾಗಿದೆ. ಪಿಡಿಓ ಮತ್ತು ಕಾರ್ಯದರ್ಶಿಗಳಿಗೆ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಮೂಲ ಸೌಲಭ್ಯ ಒದಗಿಸಲು ಸಾಕಷ್ಟು ಅನುದಾನ ಹರಿದು ಬಂದರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು. ಗ್ರಾಪಂನವರು ನೀರು ಪೂರೈಸಲು ಕಳಪೆ ಗುಣಮಟ್ಟದ ಪೈಪ್ ಅಳವಡಿಸಿದ್ದು, ನೀರಿನ ಒತ್ತಡಕ್ಕೆ ಪೈಪ್ಗಳು ಒಡೆದಿವೆ. 2 ತಿಂಗಳ ಹಿಂದೆಯೇ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು, ನಿತ್ಯ ಕತ್ತಲಲ್ಲಿಯೇ ಕಾಲ ಕಳೆಯುವಂತಾಗಿದೆ. ಮುಂಗಾರು ಮಳೆ ಅಭಾವದಿಂದಾಗಿ ರೈತ ಸಮೂಹ ಆರ್ಥಿಕವಾಗಿ ಸಂಪೂರ್ಣ ಕುಗ್ಗಿ ಹೋಗಿದೆ. ಬೆಳೆಗಳು ಬತ್ತಿ ಹೋಗುತ್ತಿವೆ. ಇನ್ನೊಂದೆಡೆ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ರೈತ ಸಮೂಹ ತುತ್ತು ಅನ್ನಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಪಂ ಇಓ ವೈ.ಎಲ್. ಹಂಪಣ್ಣ ಮನವಿ ಸ್ವೀಕರಿಸಿ ಮಾತನಾಡಿ, 4 ತಿಂಗಳಿನಿಂದ ಕುಡಿವ ನೀರಿನ ತೊಂದರೆ ಇರುವ ಬಗ್ಗೆ ಯಾರೂ ಗಮನಕ್ಕೆ ತಂದಿಲ್ಲ. ಪಿಡಿಓ ಯಾವುದೇ ಕಾರಣಕ್ಕೂ ವಿಳಂಬ ನೀತಿ ಅನುಸರಿಸದೇ 13ನೇ ಹಣಕಾಸು ಯೋಜನೆಯಲ್ಲಿ ತಕ್ಷಣವೇ ಮೋಟರ್ ಖರೀದಿಸಿ, ಜನತೆಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸೂಚಿಸಿದರು. ಜಾನು ಲಮಾಣಿ, ಮುತ್ತಣ್ಣ ಬಡಿಗೇರ, ಈರಣ್ಣ ಭೂತರಡ್ಡಿ, ಮಾನಪ್ಪ ತೇಲಿ, ಮಲ್ಲಪ್ಪ ತಳವಾರ, ಶಣ್ಮುಖಪ್ಪ ಪತ್ತಾರ, ಹನಮಂತಪ್ಪ ಹೂಗಾರ, ಪ್ರಕಾಶ ತಾರಿಕೊಪ್ಪ, ಲಕ್ಷ್ಮಣ ತಳವಾರ ಮತ್ತಿತರರು ಪಾಲ್ಗೊಂಡಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

