ಗದಗ

ಸೋಂಪುರ ಬ್ಲಾಕ್‌ಮೇಲ್ ರಾಜಕಾರಣಿ: ಕಪ್ಪತ್ತನವರ

Published On :

ಗದಗ:  ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಎಚ್.ಎಸ್. ಸೋಂಪುರ ಒಬ್ಬ ಬ್ಲಾಕ್‌ಮೇಲ್ ರಾಜಕಾರಣಿ ಎಂದು ಜೆಡಿಎಸ್‌ನ ಜಿಲ್ಲಾ ಅಧ್ಯಕ್ಷ ವಿ.ವಿ. ಕಪ್ಪತ್ತನವರ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೆಡಿಎಸ್‌ನಲ್ಲಿ ಟಿಕೆಟ್ ಸಿಗದಿರುವುದನ್ನೇ ನೆಪವಾಗಿಟ್ಟುಕೊಂಡು ಅನ್ಯ ಪಕ್ಷದವರಿಂದ ಹಣ ಪಡೆದು ಅನ್ಯ ಪಕ್ಷಕ್ಕೆ ಸೇರಿರುವುದರಿಂದ ಜೆಡಿಎಸ್‌ಗೆ ಯಾವುದೇ ನಷ್ಟವಿಲ್ಲ. ಜಿಲ್ಲಾ ಉಸ್ತುವಾರಿ ಮಂತ್ರಿಯವರಿಂದ ಭಾರಿ ಮೊತ್ತದ ಹಣವನ್ನು ಪಡೆದು ಜೆಡಿಎಸ್ ಟಿಕೆಟ್‌ಗೆ ಲಾಬಿ ನಡೆಸಿದ್ದ ಸೊಂಪುರಗೆ ಮಾಜಿ ಸಚಿವ ಬಿ.ಎಸ್. ಹೊರಟ್ಟಿಯವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಕನ್ನಡಪರ ಸಂಘಟನೆಯ ಹೆಸರಲ್ಲಿ ಯಾರ್ಯಾರಿಗೆ ಬ್ಲಾಕ್‌ಮೇಲ್ ಮಾಡಿದ್ದಾರೆ ಎಂಬುದನ್ನು ಮುಂಬರುವ ದಿನಗಳಲ್ಲಿ ಸಾಬೀತು ಪಡಿಸುವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಸೇರಿಕೊಂಡು ಪಕ್ಷದ ಸೋಲಿಗೆ ಕಾರಣರಾಗಿದ್ದರು. ಜೆಡಿಎಸ್ ಟಿಕೆಟ್ ನೀಡುವ ಭರವಸೆಯನ್ನು ಕುಮಾರಸ್ವಾಮಿಯವರಾಗಲಿ, ಹೊರಟ್ಟಿಯವರಾಗಲಿ ನೀಡಿಲ್ಲ. ನಮ್ಮ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಇವರ ಆಯ್ಕೆಗೆ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಾರೆ. ಪಕ್ಷದಲ್ಲಿದ್ದುಕೊಂಡೇ ಪಕ್ಷಕ್ಕೆ ದ್ರೋಹ ಎಸಗುವ ಇಂಥವರು ಯಾವ ಕ್ಷಣ ಯಾವ ಪಕ್ಷದಲ್ಲಿರುತ್ತಾರೆ ಎಂಬುದನ್ನು ರೋಣ ಮತಕ್ಷೇತ್ರದ ಜನ ಅರಿತಿದ್ದಾರೆ ಎಂದು ಜಿಲ್ಲಾಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಜಿಲ್ಲಾ ಉಪಾಧ್ಯಕ್ಷ ಹಾಲಪ್ಪ ಹರ್ತಿ, ರೋಣ ತಾಲೂಕು ಅಧ್ಯಕ್ಷ ರಾಮಣ್ಣ ಸಕ್ರೋಜಿ, ಜಿಲ್ಲಾ ಜೆಡಿಎಸ್ ವಕ್ತಾರ ದಾವಲ ಮುಳಗುಂದ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.