ಗದಗ

97 ನಾಮಪತ್ರ ವಾಪಸ್

Published On :

ಕನ್ನಡಪ್ರಭ ವಾರ್ತೆ, ಗದಗ, ಫೆ. 27
ತೀವ್ರ ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು, ಜಿಲ್ಲಾದ್ಯಂತ ನಾಮಪತ್ರಗಳು ಪರಿಶೀಲನೆಯಾಗಿ 896 ಕ್ರಮಬದ್ಧವಾಗಿದ್ದು ಅವುಗಳಲ್ಲಿ 97 ನಾಮಪತ್ರಗಳು ವಾಪಸಾಗಿವೆ. ಅಂತಿಮವಾಗಿ 799 ಅಭ್ಯರ್ಥಿಗಳು ಕಣದಲ್ಲಿದಲ್ಲಿದ್ದಾರೆ.
ಗದಗ-ಬೆಟಗೇರಿ ನಗರಸಭೆಗೆ 224 ಅಭ್ಯರ್ಥಿಗಳಲ್ಲಿ 30 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 194 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಂಡರಗಿ ಪುರಸಭೆಗೆ 114 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 105 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿರಹಟ್ಟಿ ಪಪಂ 97 ಅಭ್ಯರ್ಥಿಗಳಲ್ಲಿ 23 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 74 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿರಹಟ್ಟಿ ಪಟ್ಟಣದ 14ನೇ ವಾರ್ಡ್‌ಗೆ ಸಲ್ಲಿಕೆಯಾಗಿದ್ದ 2 ನಾಮಪತ್ರಗಳಲ್ಲಿ ಓರ್ವರು ವಾಪಸ್ ಪಡೆದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಮೀನಾಕ್ಷಿ ತಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರೋಣ ಪುರಸಭೆಗೆ 76 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 67 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನರಗುಂದ ಪುರಸಭೆಗೆ 73 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 64 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲಕ್ಷ್ಮೇಶ್ವರ ಪುರಸಭೆಗೆ 91 ಅಭ್ಯರ್ಥಿಗಳಲ್ಲಿ 4 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 87 ಅಭ್ಯರ್ಥಿಗಳು ಕಣದಲ್ಲಿದ್ದು, ಲಕ್ಷ್ಮೇಶ್ವರ ಪುರಸಭೆ 2ನೇ ವಾರ್ಡ್‌ಗೆ ಸಲ್ಲಿಕೆಯಾಗಿದ್ದ ನಾಮ ಪತ್ರಗಳು ವಾಪಸಾದ ಹಿನ್ನೆಲೆಯಲ್ಲಿ ನಾಗಪ್ಪ ಓಕಾಂರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಜೇಂದ್ರಗಡ ಪುರಸಭೆಗೆ 83 ಅಭ್ಯರ್ಥಿಗಳಲ್ಲಿ ಒಬ್ಬರು ನಾಮಪತ್ರ ಹಿಂಪಡೆದಿದ್ದು, 82 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನರೇಗಲ್ಲ ಪಪಂಗೆ 69 ಅಭ್ಯರ್ಥಿಗಳಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 59 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಳಗುಂದ ಪಪಂಗೆ 69 ಅಭ್ಯರ್ಥಿಗಳಲ್ಲಿ ಇಬ್ಬರು ನಾಮಪತ್ರ ಹಿಂಪಡೆದಿದ್ದು, 67 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಜೆಪಿಗೆ ಹಿನ್ನಡೆ: ಗದಗ ನಗರಸಭೆಯ 16ನೇ ವಾರ್ಡ್‌ಗೆ ಸ್ಫರ್ಧಿಸಲು ಬಿಜೆಪಿಯ ಬಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದ ಗಣೇಶ ಹುಬ್ಬಳ್ಳಿ ಎಂಬುವರು ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿಗೆ ಹಿನ್ನಡೆಯಾದಂತಾಗಿದೆ.
ಇದರಿಂದ ಬಿಜೆಪಿ 35 ವಾರ್ಡ್‌ಗಳಲ್ಲಿ ಒಟ್ಟು 33 ವಾರ್ಡ್‌ಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದಂತಾಗಿದೆ. ಇನ್ನು 35 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಇದೀಗ 34 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಅದೃಷ್ಟ ಪರೀಕ್ಷೆಗೆ ಒಳಪಡಿಸಿದೆ. ಕೆಜೆಪಿ 27, ಜೆಡಿಎಸ್ 28 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.