ನಿರಂತರ ಪರಿಶ್ರಮದಿಂದ ಅದ್ಭುತ ಸೃಷ್ಟಿಸಬಹುದು
ಕನ್ನಡಪ್ರಭ ವಾರ್ತೆ, ಗದಗ, ಫೆ. 27
ನಿರಂತರ ಪರಿಶ್ರಮದಿಂದ ಅದ್ಭುತಗಳನ್ನು ಸೃಷ್ಟಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಹೇಳಿದರು.
ಅವರು ಸ್ಥಳೀಯ ಸಿದ್ಧಲಿಂಗನಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಗುರಿ ಸಾಧನೆಗೆ ಸತತ ಪ್ರಯತ್ನ, ಪರಿಶ್ರಮ, ಛಲ ಅತ್ಯವಶ್ಯ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಜಗತ್ತಿನ ಜ್ಞಾನವನ್ನು ಅರಿಯುವುದು ಅವಶ್ಯ. ಶಿಕ್ಷಣವೆಂಬುದು ಮನುಷ್ಯನ ಪ್ರಗತಿಗೆ ದಾರಿ ದೀಪವಾಗಬೇಕು. ವಿದ್ಯಾರ್ಥಿಗಳು ಹೆಚ್ಚು ಆಸಕ್ತಿಯಿಂದ ಗುರುಗಳ ಮಾರ್ಗದರ್ಶನದಲ್ಲಿ ಮುಂದುವರಿಯಬೇಕು. ಶಿಸ್ತು ಸಾಧನೆಗೆ ಜೀವಾಳವಾಗಿದ್ದರಿಂದ ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಯಾವುದೇ ಆತಂಕವಿಲ್ಲದೆ ಧೈರ್ಯದಿಂದ ಬರೆದು ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕೆಂದು ಶುಭ ಹಾರೈಸಿದರು.
ಬಹುಮಾನ ವಿತರಕರಾಗಿ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ್ ನಾಯಕ ಮಕ್ಕಳಿಗೆ ಬಹುಮಾನ ವಿತರಿಸಿದರು.
ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಹಾಗೂ ವಿದ್ಯಾರ್ಥಿಗಳು ರಚಿಸಿದ ಮಾಣಿಕ್ಯ ಕೃತಿಯನ್ನು ಮಂಜುನಾಥ ಬೊಮ್ಮನಕಟ್ಟಿ ಬಿಡುಗಡೆಗೊಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ದಾನಪ್ಪ ತಡಸದ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ವಿ. ಕುರಹಟ್ಟಿ ಹಾಗೂ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ ಜರುಗಿತು.
ಇದೇ ಸಂದರ್ಭದಲ್ಲಿ ಕನ್ನಡ ಪ್ರತಿಭಾ ಪರೀಕ್ಷೆ, ವಚನಕಮ್ಮಟ, ಸ್ವಾಮಿ ವಿವೇಕಾನಂದ ಪರೀಕ್ಷೆಗಳ ವಿಜೇತರಿಗೆ ಹಾಗೂ ಶಾಲಾ ವಾರ್ಷಿಕ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯೋಪಾಧ್ಯಾಯ ಎಸ್.ಬಿ. ಗೌಡರ ಸ್ವಾಗತಿಸಿದರು. ಕೆ.ವಿ. ಕೊರಡ್ಡಿ ಹಾಗೂ ಎಂ.ಎಸ್. ರಾಮಣ್ಣವರ ನಿರೂಪಿಸಿದರು. ಸಿ.ಎಸ್. ಮಾನ್ವಿಯವರು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

