ಇಂದು ಮುಂಡರಗಿಗೆ ಕುಮಾರಸ್ವಾಮಿ
ಮುಂಡರಗಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಾ. 1ರ ಮಧ್ಯಾಹ್ನ 12.30 ಗಂಟೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಂಡರಗಿಗೆ ಆಗಮಿಸಲಿದ್ದಾರೆ. ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಜೆಡಿಎಸ್ ವತಿಯಿಂದ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಗದಗಕ್ಕೆ ಬಿ. ಶ್ರೀರಾಮುಲು
ಗದಗ: ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಮಾ. 1ರ ಸಂಜೆ 5 ಗಂಟೆಗೆ ನಗರಕ್ಕೆ ಆಗಮಿಸಿ, ಗದಗ-ಬೆಟಗೇರಿ ಅವಳಿ ನಗರದ 35 ವಾರ್ಡ್ಗಳಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ ಪರ ಬಹಿರಂಗ ಪ್ರಚಾರ ನಡೆಸುವರು. ಈ ಸಂದರ್ಭದಲ್ಲಿ ಮುಖಂಡ ಅನಿಲ ಮೆಣಸಿನಕಾಯಿ, ಜಿಲ್ಲಾಧ್ಯಕ್ಷ ಗಂಗಣ್ಣ ಮಹಾಂತಶೆಟ್ಟರ ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಎಲ್ಲ ಅಭ್ಯರ್ಥಿಗಳು ಹಾಗೂ ಮುಖಂಡರು ಉಪಸ್ಥಿತರಿರುವರು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಎಸ್.ಎಚ್. ಶಿವನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಂಟಂ ಪಲ್ಟಿ: ಓರ್ವ ಸಾವು
ಮುಳಗುಂದ: ಮುಳಗುಂದ ಹಾಗೂ ಕುರ್ತಕೋಟಿ ರಸ್ತೆ ಮಧ್ಯೆ ಟಂಟಂ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ. ಮೃತನನ್ನು ರಮಜಾನ್ಸಾಬ ಹಳೇಮನಿ (36) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

