ಗ್ರಾಮಾಭಿವೃದ್ಧಿಗೆ ಆದ್ಯತೆ: ಶಾಸಕ ಸಿ.ಸಿ. ಪಾಟೀಲ್
ಕನ್ನಡಪ್ರಭ ವಾರ್ತೆ, ನರಗುಂದ, ಜ. 22
ಹಲವು ವರ್ಷಗಳಿಂದ ನಮ್ಮನ್ನಾಳಿದ ಸರ್ಕಾರಗಳು ಗ್ರಾಮೀಣ ಪ್ರದೇಶಗಳ ಬಗ್ಗೆ ಲಕ್ಷ್ಯ ವಹಿಸದೇ ಇರುವುದರಿಂದ ಬಹುತೇಕ ಗ್ರಾಮೀಣ ಪ್ರದೇಶಗಳು ಹಿಂದುಳಿದಿವೆ. ಅಂತಹ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ್ ಹೇಳಿದರು.
ಈಚೆಗೆ ಅವರು ತಾಲೂಕಿನ ಕಲಕೇರಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿ ಹಾಗೂ ದುರ್ಗಾದೇವಿ ಸಮುದಾಯ ಭವನ ನಿರ್ಮಾಣ ಹಾಗೂ ನೀರಾವರಿ ಇಲಾಖೆಯ ಎಸ್.ಸಿ.ಪಿ.ಟಿ.ಸಿ.ಪಿ ಯೋಜನೆಯ ಅಡಿಯಲ್ಲಿ ರು. 30 ಲಕ್ಷ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮಗಳು ಅಭಿವೃದ್ಧಿಯಾಗದೇ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಈ ದೇಶದಲ್ಲಿ ಆಳಿದ ಪಕ್ಷಗಳು ಹಿಂದುಳಿದ ಜನಾಂಗದವರಿಗೆ ಸುಳ್ಳು ಆಶ್ವಾಸನೆ ಕೊಡುತ್ತಾ ಅವರ ಅಭಿವೃದ್ಧಿಯನ್ನು ಕಡಗಣಿಸಿದ ಹಿನ್ನೆಲೆಯಲ್ಲಿ ಗ್ರಾಮಗಳು ಇಂದಿಗೂ ಅಭಿವೃದ್ಧಿ ಕಾಣದೇ ಹಿಂದುಳಿದಿವೆ.
ಆದರೆ ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪನವರು ಎಲ್ಲ ಸಮುದಾಯದ ಜನಾಂಗದವರಿಗೆ ಹಾಗೂ ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣರಿಗೆ ಸರ್ಕಾರ ಯೋಜನೆಗಳನ್ನು ತಲುಪಿಸುವ ನಿರ್ಣಯವನ್ನು ಕೈಗೊಂಡು ಕೋಟ್ಯಾಂತರ ರು. ಗಳನ್ನು ಬಿಡುಗಡೆ ಮಾಡಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಈ ಗ್ರಾಮಕ್ಕೆ 1 ಕೋಟಿ ರು. ಗಳ ಕೆರೆ ಹೂಳೆತ್ತವುದು ಮತ್ತು ಕುಡಿಯುವ ನೀರು ಶುದ್ದೀಕರಣಕ್ಕೆ ಆದ್ಯತೆ ಕೊಟ್ಟು ಅಭಿವೃದ್ದಿ ಮಾಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು.
ಜಿಪಂ ಅಧ್ಯಕ್ಷ ಎಂ.ಎಸ್.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ, ಎಸ್.ಬಿ.ಕರಿಗೌಡರ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಹೊನ್ನಪ್ಪಗೌಡ ಪಾಟೀಲ, ಅರ್ಜುನಪ್ಪ ಈಟಿ, ಕೆಂಪಪ್ಪ ತಳವಾರ, ಮಾರುತಿ ತಳವಾರ, ಕುಬೇರಗೌಡ ಪಾಟೀಲ, ವೀರಣ್ಣ ಮ್ಯಾಗೇರಿ, ಪ್ರವೀಣ ಪಾಟೀಲ, ಎಲ್.ಎಂ. ಪಾಟೀಲ, ನವೀನ ಪಾಟೀಲ, ಶಿಶು ಅಭಿವೃದ್ಧಿ ಅಧಿಕಾರಿ ಟಿ.ಜಿ. ಶಂಕರಮೂರ್ತಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎ. ಉಪಾರ, ಹಿರೇಮಠ, ಫಕೀರಪ್ಪ ಮಾದರ ಉಪಸ್ಥಿತರಿದ್ದರು. ವಿಜಯಲಕ್ಷ್ಮೀ ಕೆಂಚನಗೌಡ್ರ ಸ್ವಾಗತಿಸಿ, ನಿರೂಪಿಸಿದರು. ಶಾರದಾ ಹಳಮನಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

