ದೇವದಾಸಿ ಪದ್ಧತಿ ಕೊನೆಗೊಳ್ಳಬೇಕು: ಕಮತಗಿ ಆಶಯ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಜ. 23
ದೇವರು ಮತ್ತು ಭಕ್ತಿ ಹೆಸರಿನಲ್ಲಿ ನಡೆಯುತ್ತಿರುವ ದೇವದಾಸಿ ಪದ್ಧತಿಯು ಆರೋಗ್ಯವಂತ ಸಮಾಜಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಲಕ್ಷ್ಮೇಶ್ವರ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಎಂ.ಐ. ಕಮತಗಿ ಅಭಿಪ್ರಾಯ ಪಟ್ಟರು.
ಪುರಸಭೆಯ ಪಪೂ ಮಹಾವಿದ್ಯಾಲಯದಲ್ಲಿ ಗದಗ ಜಿಲ್ಲಾ ದೇವದಾಸಿ ಪುನರ್ವಸತಿ ಯೋಜನಾ ಕೇಂದ್ರ, ಶಿರಹಟ್ಟಿ ತಾಲೂಕು ಕಾನೂನು ಸೇವಾ ಸಮಿತಿ, ಲಕ್ಷ್ಮೇಶ್ವರ ವಕೀಲರ ಸಂಘದ ಆಶ್ರಯದಲ್ಲಿ ಜರುಗಿದ ಮಹಿಳಾ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿದ ಅವರು, ದೇವದಾಸಿ ಪದ್ಧತಿ ಸಮಾಜದ ಅನಿಷ್ಟಗಳಲ್ಲಿ ಒಂದು. ಅಜ್ಞಾನ ಮತ್ತು ಮೂಢನಂಬಿಕೆಯೇ ಇದಕ್ಕೆ ಮೂಲ ಕಾರಣ. ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ಇಲ್ಲಿ ಮೇಲು ಕೀಳು ಎಂಬುದು ಇಲ್ಲ. ದೈವ ಮತ್ತು ದೇವರ ಹೆಸರಿನಲ್ಲಿ ನಡೆಯುವ ಕ್ರೂರ ಮತ್ತು ಅನಿಷ್ಟ ಪದ್ಧತಿಗಳು ಸಮಾಜದಿಂದ ಕಣ್ಮರೆಯಾಗಬೇಕು ಎಂದರು.
ದೇವದಾಸಿ ಪದ್ಧತಿಗೆ ಪ್ರೋತ್ಸಾಹ ನೀಡುವವರೆಗೂ ಕಾನೂನಿನಲ್ಲಿ ಶಿಕ್ಷೆ ಕಾದಿದೆ. ಈ ಕೀಳು ಪದ್ಧತಿ ಬಗ್ಗೆ ಮಹಿಳೆಯರು ಹೆಚ್ಚು ಜಾಗೂರಕರಾಗಿರಬೇಕು ಎಂದರು.
ನ್ಯಾಯವಾದಿ ಮಹೇಶ ಹಾರೂಗೇರಿ ಮಹಿಳಾ ದೌರ್ಜನ್ಯ, ಬಾಲ್ಯ ವಿವಾಹ ಮತ್ತು ಜಾತಿ ಪದ್ಧತಿ ಬಗ್ಗೆ ತಿಳಿವಳಿಕೆ ನೀಡಿದರು. ಗದಗ ಜಿಲ್ಲಾ ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಆರ್.ಜಿ. ಲಮಾಣಿ ದೇವದಾಸಿಯರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ಮತ್ತು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.
ಲಕ್ಷ್ಮೇಶ್ವರ ಪಿಎಸ್ಐ ಎಚ್.ಡಿ. ದೊಡ್ಡಮನಿ, ಪುರಸಭೆಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಧರಣಿ, ಪಪೂ ಕಾಲೇಜಿನ ಪ್ರಾಚಾರ್ಯ ಪಿ.ಐ. ಸಿದ್ದನಗೌಡ್ರ ಉಪಸ್ಥಿತರಿದ್ದರು. ಉಪನ್ಯಾಸಕ ಡಿ.ಬಿ. ರಘುತಿಲಕ ಸ್ವಾಗತಿಸಿ, ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

