ಗದಗ

ಗಿರಿಯಮ್ಮ ನಿಧನ (ಸುದ್ದಿ ಸಂಕ್ಷೇಪ)

Published On :

ಕನ್ನಡಪ್ರಭ ವಾರ್ತೆ, ಗದಗ, ಜ.23
ತಾಲೂಕಿನ ಹೊಸಹಳ್ಳಿಯ ಪ್ರಗತಿಪರ ರೈತ ಶಿವಪ್ಪ ಚಾಕಲಬ್ಬಿ ಅವರ ಧರ್ಮಪತ್ನಿ ಗಿರಿಯಮ್ಮ (74) ಬುಧವಾರ ನಿಧನರಾದರು.
ಅಂತ್ಯಕ್ರಿಯೆ ಗುರುವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಹೊಸಹಳ್ಳಿಯ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರಿಗೆ ಪತಿ, ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು, ಅಪಾರ ಬಂಧು ಬಳಗ ಇದ್ದಾರೆ.
 ಕಾಂಗ್ರೆಸ್ ಮುಖಂಡ ವೆಂಕಪ್ಪ ಚಾಕಲಬ್ಬಿ ಅವರು ಮೃತರ ಹಿರಿಯ ಪುತ್ರ.
ಗಿರಿಯಮ್ಮನವರ ನಿಧನಕ್ಕೆ ಮಾಜಿ ಸಚಿವ ಎಚ್.ಕೆ. ಪಾಟೀಲ್, ಮಾಜಿ ಶಾಸಕ ಡಿ.ಆರ್. ಪಾಟೀಲ್, ಕುರ್ತಕೋಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಇನಾಮತಿ, ಹುಲಕೋಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಕರಿಕಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.


ರಾಹುಲ್‌ಗಾಂಧಿ ಟೀಕೆ: ಆಕ್ಷೇಪ
ಗದಗ: ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಟೀಕಿಸುವ ನೈತಿಕ ಹಕ್ಕು ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಇಲ್ಲ ಎಂದು ಗದಗ ವಿಧಾನಸಭಾ ಕ್ಷೇತ್ರದ ಯುವ ಕಾಂಗೆಸ್ ಅಧ್ಯಕ್ಷ ರವಿಕುಮಾರ ರೆಡ್ಡಿ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಎಸ್‌ಆರ್ ಪ್ರಾದೇಶಿಕ ಪಕ್ಷದ ಅಧ್ಯಕ್ಷ ಬಿ. ಶ್ರೀರಾಮುಲು ಅವರು ಗದುಗಿನಲ್ಲಿ ದೇಶಕ್ಕೆ ರಾಹುಲ್‌ಗಾಂಧಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದು ಸರಿಯಾದ ಕ್ರಮವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಗಾಂಧಿ ಮನೆತನದ ಕೊಡುಗೆಯನ್ನು ದೇಶವೇ ಮನಗಂಡಿದೆ. ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ, ರಾಜೀವ ಗಾಂಧಿ, ಸೋನಿಯಾ ಗಾಂಧಿ ಇದೀಗ ರಾಹುಲ್ ಗಾಂಧಿ ಹೀಗೆ ಗಾಂಧಿ ಮನೆತನವೇ ರಾಜಕೀಯ ಕ್ಷೇತ್ರದಲ್ಲಿದ್ದು, ಸಾಮಾಜಿಕ, ವೈಚಾರಿಕ ಮತ್ತು ರಾಜಕೀಯ ಬದಲಾವಣೆ ತಂದಿದೆ. ಪುನಃ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್‌ನ ಧುರೀಣ ಮುತ್ತಣ್ಣ ಗದಗಿನ, ಗಂಗಾಧರ ನಳೇಗಾಂವಮಠ, ಸತೀಶ ಖಾನಾಪೂರ, ಶಫಿ ನಾಗರಕಟ್ಟಿ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಕೆಡಿಪಿ  ತ್ರೈಮಾಸಿಕ ಸಭೆ
ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಅಧ್ಯಕ್ಷತೆಯಲ್ಲಿ ಜ. 29ರಂದು ಬೆಳಗ್ಗೆ 10.30 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸ್ತು ಪ್ರದರ್ಶನ
ಗದಗ: ಗದಗ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ವಸ್ತು ಪ್ರದರ್ಶನವನ್ನು ಜ. 29ರಂದು ಬೆಳಗ್ಗೆ 9 ಗಂಟೆಗೆ ನಗರದ ಬಿಇಓ ಕಚೇರಿ ಹತ್ತಿರದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ನಂ. 1ರಲ್ಲಿ ಏರ್ಪಡಿಸಲಾಗಿದೆ. ತಾಲೂಕು ಮಟ್ಟದಲ್ಲಿ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರು ಭಾಗವಹಿಸಬೇಕು. ಎಲ್ಲ ಶಿಕ್ಷಕರು ಕಡ್ಡಾಯವಾಗಿ ಭಾಗವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಆಹ್ವಾನ
ಗದಗ: ವಿಕಲಚೇತನರಿಗೆ ಸಾಧನ ಸಲಕರಣೆ ಯೋಜನೆಯಡಿ ಅನುದಾನ ಬಿಡುಗಡೆಯಾಗಿದ್ದು, ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಂಗವಿಕಲರ ಗುರುತಿನ ಚೀಟಿ, ಅಂಗವಿಕಲತೆ ತೋರುವ 3 ಫೋಟೋಗಳು, ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಸಾಧನ ಸಲಕರಣೆ ಅಗತ್ಯತೆ ಕುರಿತು ಜಿಲ್ಲಾ ಸರ್ಜನ್‌ರವರಿಂದ ಶಿಫಾರಸು ಪತ್ರಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 06 ಗದಗ ಇವರಿಗೆ ಜನವರಿ 31 ರೊಳಗೆ ಕಚೇರಿ ಅವಧಿಯಲ್ಲಿ ಸಲ್ಲಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.