ನರೇಗಲ್ಲ: ಸಂಭ್ರಮದ ಗಣರಾಜ್ಯೋತ್ಸವ
ನರೇಗಲ್ಲ: ಪಟ್ಟಣದ ಹಲವೆಡೆ 64ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ಸಂತೆ ಬಜಾರದಲ್ಲಿ ಸಾರ್ವಜನಿಕ ಧ್ವಜಾರೋಹಣವನ್ನು ಪಪಂ ಅಧ್ಯಕ್ಷೆ ವಾಸಂತವ್ವ ಹುಲಕೋಟಿ ನೆರವೇರಿಸಿದರು. ಪಪಂ ಮುಖ್ಯಾಧಿಕಾರಿ ಐ.ಕೆ. ಗುಡದಾರಿ, ಅಭಿಯಂತರ ಪಿ.ಪಿ. ಕಾಟೆವಾಲೆ, ಪಪಂ ಸಿಬ್ಬಂದಿ, ಸ್ಥಳೀಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಮುಖ್ಯೋಪಾದ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಹಿರಿಯ ನಾಗರಿಕರಾದ ದೊಡ್ಡಪ್ಪ ಕೊಟಗಿ, ಶಿವಪ್ಪ ಹೊಸಮನಿ, ಕಳಕಪ್ಪ ಪಾಯಪ್ಪಗೌಡ್ರ ಮುಂತಾದವರು ಉಪಸ್ಥಿತರಿದ್ದರು.
ಏಕಕಾಲಕ್ಕೆ ಒಂದೇ ಸ್ಥಳದಲ್ಲಿರುವ ಸೊಸೈಟಿ, ಗ್ರಾಮ ಲೆಕ್ಕಾಧಿಕಾರಿ ಕಚೇರಿಯ ಸಾರ್ವಜನಿಕ ಧ್ವಜ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಸಂಘ ಸಂಸ್ಥೆಗಳ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ, ನಂತರ ಪಪಂ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮದಿಂದ ಆಚರಿಸಿದರು. ಸ್ಥಳೀಯ ಸಾರ್ವಜನಿಕ ಗ್ರಂಥಾಲಯದ ಧ್ವಜಾರೋಹಣವನ್ನು ಮಾಜಿ ಪಪಂ ಅಧ್ಯಕ್ಷ ಶರಣಪ್ಪ ಕಲಾಲ ಬಂಡಿ ನೆರವೇರಿಸಿದರು.
ಸರ್ಕಾರಿ ಮಾದರಿ ಕೇಂದ್ರ ಶಾಲೆಯ ಧ್ವಜಾರೋಹಣವನ್ನು ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಸಿದ್ನೆಕೊಪ್ಪ ನೆರವೇರಿಸಿದರು. ರೇಣುಕಾದೇವಿ ಕನ್ನಡ ಕಾನ್ವೆಂಟ್ ಸ್ಕೂಲ್ನ ಧ್ವಜಾರೋಹಣವನ್ನು ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ನೆರವೇರಿಸಿದರು. ಕನಕದಾಸ ಶಿಕ್ಷಣ ಸಮಿತಿ ಪ್ರೌಢಶಾಲೆಯ ಧ್ವಜಾರೋಹಣವನ್ನು ಎಂ.ಎಸ್. ಬೆನಕನವಾರಿ ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

