ಗದಗ

ವದಂತಿಗೆ ಕಿವಿಗೊಡಬೇಡಿ: ಪಾಟೀಲ

Published On :

ನರಗುಂದ: ನರಗುಂದ ಪಟ್ಟಣದಲ್ಲಿ ಎರಡು ಕೋಮಿನವರ ಮಧ್ಯೆ ಉತ್ತಮ ಬಾಂಧವ್ಯವಿದೆ. ಆದರೆ, ಕೆಲ ಕಿಡಿಗೇಡಿಗಳು ಕೋಮು ಗಲಭೆಯನ್ನು ಸೃಷ್ಟಿಸಿದ್ದು, ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳು ಹಬ್ಬಿಸುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಪೊಲೀಸ್ ಕಚೇರಿಯಲ್ಲಿ ಕರೆದ ಶಾಂತಿ ಸಭೆಯಲ್ಲಿ ಮಾತನಾಡಿ, ಈ ಪಟ್ಟಣದಲ್ಲಿ ಎರಡು ಕೋಮಿನ ಜನರು ಹಲವು ವರ್ಷಗಳಿಂದಲೂ ಉತ್ತಮವಾದ ಬಾಂಧವ್ಯವನ್ನು ಇಟ್ಟುಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಬಾಳುತ್ತಿದ್ದಾರೆ. ಆದರೆ, ಕೆಲವು ಕಿಡಿಗೇಡಿಗಳು ಬಾಂಧವ್ಯವನ್ನು ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸುತ್ತಿದ್ದು, ಎರಡು ಸಮಾಜ ಬಾಂಧವರು ಶಾಂತಿಯನ್ನು ಕಾಪಾಡಿಕೊಂಡು ಹೋಗಬೇಕು. ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ತಿಳಿಸಿದರು. ಎಸ್‌ಪಿ ಶರಣಪ್ಪ ಎಸ್.ಡಿ. ಮಾತನಾಡಿ, ಈ ಗಲಭೆಗೆ ಕಾರಣವಾದವರನ್ನು ಶೀಘ್ರ ಪತ್ತೆ ಹಚ್ಚಿ ಅವರಿಗೆ ಸೂಕ್ತ ಶಿಕ್ಷೆಯನ್ನು ವಿಧಿಸಲಾಗುವುದು. ಹಾಗೂ ಪಟ್ಟಣದಲ್ಲಿರುವ ಎಲ್ಲ ಕೋಮಿನವರು ಹಿಂದಿನಂತೆಯೇ ಶಾಂತತೆಯನ್ನು ಕಾಪಾಡಿಕೊಂಡು ಹೋಗುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಚಂದ್ರಶೇಖರ ಕೋಟಿ, ಪ್ರಕಾಶ ಪಟ್ಟಣಶಟ್ಟಿ, ಸಿ.ಎಸ್.ಪಾಟೀಲ, ಎಫ್.ಆರ್. ಪಾಟೀಲ, ಎಂ.ಎಂ. ಮುಳ್ಳೂರ, ಎಸ್.ಬಿ. ಕರಿಗೌಡರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.