ಇಂದು ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ
ಗದಗ: ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಘಟಕದ ವತಿಯಿಂದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವನ್ನು ಜ. 29ರ ಸಂಜೆ 5ಗಂಟೆಗೆ ಗದಗ ತಾಲೂಕು ಗಾವರವಾಡ ಗ್ರಾಮದಲ್ಲಿ ಹಾಗೂ ಸಂಜೆ 6ಗಂಟೆಗೆ ಕದಡಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಪಕ್ಷದ ಜಿಲ್ಲಾ ಮುಖಂಡ ಎಸ್.ಎಚ್. ಶಿವನಗೌಡರ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುಭಾಸಚಂದ್ರ ದಾನರಡ್ಡಿ ವಹಿಸುವರು. ಅಥಿತಿಗಳಾಗಿ ಹಲವಾರು ಗಣ್ಯರು ಆಗಮಿಸುವರು. ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
19 ಆರೋಪಿಗಳು ವಶಕ್ಕೆ
ನರಗುಂದ: ಈದಮಿಲಾದ್ ಹಬ್ಬದ ದಿನ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಎರಡೂ ಕೋಮಿನ 19 ಆರೋಪಿಗಳನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇನ್ನು ಹಲವರು ಆರೋಪಿಗಳಿದ್ದು, ಅವರನ್ನು ಶೀಘ್ರದಲ್ಲಿಯೇ ಪತ್ತೆಹಚ್ಚಲಾಗುವುದು ಎಂದು ಸಿಪಿಐ ಪ್ರಶಾಂತ ಸಿದ್ಧನಗೌಡರ ತಿಳಿಸಿದರು.
ನೀರು ಪೂರೈಕೆ ಮಾಹಿತಿ
ಗದಗ: ಭೂಮರಡ್ಡಿ ಸರ್ಕಲ್, ಮಹಾಕೂಟೇಶ್ವರದ ಕೆಲವು ಭಾಗ, ಮಹಾವೀರ ಕಾಲನಿ, ಕಾಶೀವಿಶ್ವನಾಥ ನಗರ, ಸಂಭಾಪೂರದ ಪೊಲೀಸ ಕ್ವಾಟರ್ಸ್, ಪಂಚಾಕ್ಷರಿ ನಗರ, ಹಾತಲಗೇರಿ ನಾಕಾ, ಚರ್ಚರೋಡನ ಉಳಿದ ಭಾಗಗಳಲ್ಲಿ ಮಂಗಳವಾರ ನೀರು ಪೂರೈಕೆ ಮಾಡಲಾಗುವುದೆಂದು ಪ್ರಕಟಣೆ ತಿಳಿಸಿದೆ.
ಇಂದು ಮಕ್ಕಳ ಹಬ್ಬ
ಗದಗ: ಧಾರವಾಡದ ರಾಜ್ಯ ಬಾಲವಿಕಾಸ ಅಕಾಡೆಮಿ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜ. 29ರ ಬೆಳಗ್ಗೆ 11 ಕ್ಕೆ ನಗರದ ಮುಳಗುಂದ ರಸ್ತೆಯ ಕನಕ ಭವನದಲ್ಲಿ ಮಕ್ಕಳ ಹಬ್ಬ ಏರ್ಪಡಿಸಲಾಗಿದೆ. ಸಚಿವ ಕಳಕಪ್ಪ ಬಂಡಿ ಉದ್ಘಾಟಿಸುವರು. ಶಾಸಕ ಶ್ರೀಶೈಲಪ್ಪ ಬಿದರೂರ ಅಧ್ಯಕ್ಷತೆ ವಹಿಸುವರು. ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಮಹೇಶ ಟೆಂಗಿನಕಾಯಿ ಚೆಕ್ ವಿತರಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

