ಗದಗ

ನೆಲ, ಜಲ ರಕ್ಷಣೆ: ಸಂಘಟನೆಗಳ ಪಾತ್ರ ಪ್ರಮುಖ

Published On :

ಕನ್ನಡಪ್ರಭ ವಾರ್ತೆ, ಗದಗ, ಜ. 30
ನಾಡಿನ ನೆಲ, ಜಲ, ಜನರ ರಕ್ಷಣೆಯಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅವರು ಬುಧವಾರ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಜಯಕರ್ನಾಟಕ ಸಂಘಟನೆಯ ವತಿಯಿಂದ ಏರ್ಪಡಿಸಲಾಗಿದ್ದ ಗದಗ ಜಿಲ್ಲಾ ಬೃಹತ್ ಸಮಾವೇಶದಲ್ಲಿ ಮಹಾತ್ಮಾಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದರು.
ರಾಜ್ಯದಲ್ಲಿ ಜಯಕರ್ನಾಟಕ ಸಂಘಟನೆಯು ಜನರ ಆಶೋತ್ತರಗಳಿಗೆ ಸ್ಪಂದಿಸುತ್ತ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಪ್ರಾಮಾಣಿಕವಾಗಿ ಹೋರಾಟ ನಡೆಸುತ್ತಾ ಬರುತ್ತಿರುವುದು ಶ್ಲಾಘನೀಯವಾಗಿದೆ. ಸಂಘಟನೆಗಳು ಯಾವುದೇ ರೀತಿಯ ಆಸೆ, ಆಮಿಶಗಳಿಗೆ ಒಳಗಾಗದೇ ಪ್ರಾಮಾಣಿಕ ಸೇವೆ ಸಲ್ಲಿಸಬೇಕಾಗಿದೆ. ಸಂಘಟನೆಗಳು ಬಲಗೊಳ್ಳಲು ಯುವಕರ ಪಾತ್ರ ಪ್ರಮುಖ. ನಾಡಿನ ಪ್ರಜ್ಞಾವಂತ ಯುವಕರು ನೆಲ, ಜಲ, ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಇಂತಹ ಸಂಘಟನೆಗಳ ಮೂಲಕ ನಾಡಿನ ಹಿತಕಾಯುವ ಕೆಲಸಕ್ಕೆ ಮುಂದಾಗಬೇಕಿದೆ ಎಂದರು.
ಎಲ್ಲಡೆ ಭ್ರಷ್ಟಾಚಾರ, ಅಹಿಂಸೆಯು ತಾಂಡವಾಡುತ್ತಿದ್ದು, ಇದನ್ನು ತಡೆದು, ಯುವಕರು ಉತ್ತಮ ನಾಡನ್ನು ಕಟ್ಟುವಲ್ಲಿ ಮುಂದಾಗಬೇಕಾಗಿದೆ. ಇನ್ನು ಕೆಲವು ಅಧಿಕಾರಿಗಳು ಹಣದ ಆಸೆಗೆ ತಮ್ಮ ಕರ್ತವ್ಯವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇಂತಹ ಅಧಿಕಾರಿಗಳಿಗೆ ಸಂಘಟನೆಗಳು ದುಸ್ವಪ್ನವಾಗಿವೆ. ಸಂಘಟನೆಯ ಪದಾಧಿಕಾರಿಗಳು ತಮ್ಮ ಸಂಘಟನೆಗೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುವಂತೆ ಕೆರೆ ನೀಡಿದರು.
ಉದ್ಘಾಟನೆ ನೆರವೇರಿಸಿದ ಸಂಘಟನೆಯ ಉತ್ತರ ಕರ್ನಾಟಕದ ರಾಜ್ಯಾಧ್ಯಕ್ಷ ವೀರಣ್ಣ ಕೊರಳ್ಳಿ ನಗರದಲ್ಲಿರುವ ಮೂಲಭೂತ ಸೌಲಭ್ಯಗಳ ಕುರಿತು ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಸಂಸದ ಪಿ.ಸಿ. ಗದ್ದಿಗೌಡ್ರ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಹೊಸಳ್ಳಿಯ ಅಭಿನವ ಬೂದೀಶ್ವರ ಶ್ರೀಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಈಶಪ್ಪ ನಾಯ್ಕರ ವಹಿಸಿದ್ದರು.
ಮಾಜಿ ಸಚಿವ ಎಸ್.ಎಸ್. ಪಾಟೀಲ, ವಿಜಯಕುಮಾರ ಗಡ್ಡಿ, ಎಸ್.ಎಚ್. ಶಿವನಗೌಡರ, ಜಗದೀಶ ಕುಲಕರ್ಣಿ, ಸದಾನಂದ ಶೆಟ್ರ, ಬಿ.ಬಿ. ನಾಯಕ, ಮಹಬೂಬ ನದಾಫ, ರವೀದ್ರನಾಥ ದೊಡ್ಡಮೇಟಿ, ಸುರೇಶ ಮೇದಾರ, ಐ.ಎಫ್. ಬೆಟಗೇರಿ, ರಮೇಶ ಕುರ್ತಕೋಟಿ ಉಪಸ್ಥಿತರಿದ್ದರು. ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ ಚವ್ಹಾಣ ಸ್ವಾಗತಿಸಿ, ವಂದಿಸಿದರು. ನಗರದ ಮುಳಗುಂದ ನಾಕಾದಿಂದ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಜರುಗಿತು.
ರಾಜ್ಯದಲ್ಲಿ ಜಯಕರ್ನಾಟಕ ಸಂಘಟನೆ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಪ್ರಾಮಾಣಿಕವಾಗಿ ಹೋರಾಟ ನಡೆಸುತ್ತಾ ಬಂದಿರುವುದು ಶ್ಲಾಘನೀಯವಾಗಿದೆ. ಸಂಘಟನೆಗಳು ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕ ಸೇವೆ ಸಲ್ಲಿಸಬೇಕಾಗಿದೆ. ಸಂಘಟನೆಗಳು ಬಲಗೊಳ್ಳಲು ಯುವಕರ ಪಾತ್ರ ಪ್ರಮುಖ. ನಾಡಿನ ಪ್ರಜ್ಞಾವಂತ ಯುವಕರು ನೆಲ, ಜಲ, ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಇಂತಹ ಸಂಘಟನೆಗಳ ಮೂಲಕ ನಾಡಿನ ಹಿತ ಕಾಯುವ ಕೆಲಸಕ್ಕೆ ಮುಂದಾಗಬೇಕಿದೆ.
ಣ ಸಿ.ಸಿ. ಪಾಟೀಲ್, ಶಾಸಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.