ಗದಗ

ರು . 3.50 ಕೋಟಿಯಲ್ಲಿ ಕುಡಿವ ನೀರು ಯೋಜನೆ

Published On :



ಕನ್ನಡಪ್ರಭ ವಾರ್ತೆ, ಮುಂಡರಗಿ, ಜ. 30
ಹಿರೇವಡ್ಡಟ್ಟಿ ಗ್ರಾಮ ಸೇರಿದಂತೆ ನಾಲ್ಕು ಗ್ರಾಮಗಳಲ್ಲಿ # 3.50 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಕಾಮಗಾರಿ ಪ್ರಾರಂಭವಾಗಿದ್ದು, ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಬುಧವಾರ ಡಂಬಳ ಹೋಬಳಿಯ ಹಿರೇವಡ್ಡಟ್ಟಿ ಗ್ರಾಮದಲ್ಲಿ # 4.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೊರಾರ್ಜಿ ವಸತಿ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ # 28 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೂತನ ಬಸ್ ನಿಲ್ದಾನದ ಉದ್ಘಾಟನೆ, # 1.68 ಕೋಟಿ  ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುವರ್ಣ ಗ್ರಾಮ ಯೋಜನೆಗೆ ಭೂಮಿಪೂಜೆ, # 10ಲಕ್ಷ ವೆಚ್ಚದಲ್ಲಿ ಜಗಜೀವನರಾಮ್ ಸಮುದಾಯ ಭವನದ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಾನು ಎರಡು ಅವಧಿಗೆ ಶಾಸಕನಾಗಿ ಇದೀಗ ಸಚಿವನಾಗಿ ರೋಣ ಮತಕ್ಷೇತ್ರಕ್ಕೆ ಬರುವ ಡಂಬಳ ಹೋಬಳಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಡಂಬಳ ಗ್ರಾಮದಲ್ಲಿ ನಡೆಯುತ್ತಿರುವ ರಾಣಿ ಚೆನ್ನಮ್ಮ ಶಾಲೆಗೆ ಈಗಾಗಲೇ 15 ಎಕರೆ ಜಾಗೆಯನ್ನು ಗುರುತಿಸಲಾಗಿದ್ದು, # 6 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣದ ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ಸಣ್ಣ ನೀರಾವರಿ ಇಲಾಖೆಯಿಂದ ಹಿರೇವಡ್ಡಟ್ಟಿ ಗ್ರಾಮದಲ್ಲಿ ಸುಮಾರು # 2 ಕೋಟಿ ವೆಚ್ಚದಲ್ಲಿ ಬಾಂದಾರ್‌ಗಳನ್ನು ನಿರ್ಮಿಸಲಾಗಿದೆ. ಈ ಭಾಗದ ರೈತರ ಕನಸಾಗಿರುವ ಶಿಂಗಟಾಲೂರು ಹುಲಿಗುಡ್ಡ ಏತ ನೀರಾವರಿ ಯೋಜನೆ ಎಡದಂಡೆ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಇದರಿಂದಾಗಿ ಈ ಭಾಗದ ಸುಮಾರು 2500 ಎಕರೆ ರೈತರ ಜಮೀನುಗಳು ನೀರಾವರಿಯಾಗಲಿವೆ ಎಂದರು.
ಗದಗ ಮುಂಡರಗಿ ರಸ್ತೆ ಸೇರಿದಂತೆ ಅತಿ ಹೆಚ್ಚು ರಸ್ತೆ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದರು. ರೋಣ ಮತ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಅನುಕೂಲ ಮಾಡಲಾಗಿದೆ. ಈ ಹಿಂದೆ ಮುಂಡರಗಿ ತಾಲೂಕು ಹಿಂದುಳಿದ ತಾಲೂಕು ಎಂದು ಹೇಳಲಾಗುತ್ತಿತ್ತು. ಮುಂಬರುವ ದಿನಗಳಲ್ಲಿ ಅದು ಗದಗ ಜಿಲ್ಲೆಯಲ್ಲಿಯೇ ಮುಂದುವರಿದ ತಾಲೂಕು ಆಗಲಿದೆ. ಮುಂಡರಗಿ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಹುಬ್ಬಳ್ಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿದರು.
ಹಿರೇವಡ್ಡಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವ್ವ ವೆಂಕಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ವೀರೇಶ್ವರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷೆ ತಾರಾಬಾಯಿ ಚವ್ಹಾನ, ಉಪಾಧ್ಯಕ್ಷೆ ಅಕ್ಕಮಹಾದೇವಿ ಹಾರೋಗೇರಿ, ಬಿ.ಎಸ್. ಗದ್ದಿಕೇರಿ, ಮಹ್ಮದ್‌ಅಲಿ ರಜಬಲಿ, ಕಸ್ತೂರೆವ್ವ ಪಾಟೀಲ, ಬೀರಪ್ಪ ಬಂಡಿ, ನೂಜಾನ ಮುಂಡರಗಿ, ಶಾರದಾ ಕವಲೂರ, ಎಸ್.ವಿ. ತಿಗರಿಮಠ, ಎಂ.ಎ. ರಡ್ಡೇರ, ಉಮೇಶ ಅಂಕದ, ನಾಗಪ್ಪ ಕಾಟ್ರಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿವಪ್ಪ ಅಂಕದ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ.ಎಸ್.ದೊಡವಾಡ ಕಾರ್ಯಕ್ರಮ ನಿರೂಪಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.