ಶಿಂಧೆ ರಾಜಿನಾಮೆಗೆ ಆಗ್ರಹ
ನರಗುಂದ: ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆಯವರು ಹಿಂದೂ ಧರ್ಮದ ಬಗ್ಗೆ ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದು, ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡದೇ ಇದ್ದಲ್ಲಿ ಮತ್ತೊಂದು ಸುತ್ತಿನ ಹೋರಾಟ ಮಾಡಲಾಗುವುದೆಂದು ಬಿಜೆಪಿ ತಾಲೂಕು ಅಧ್ಯಕ್ಷ ಸಿ.ವೈ. ದಂಡಿನ ಹೇಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಮಂತ್ರಿ ದೇಶದ ಜನತೆಯಲ್ಲಿ ಕ್ಷಮೆ ಕೋರಬೇಕು. ಶಿಂಧೆಯವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಒತ್ತಾಯಿಸಿದ್ದಾರೆ.
ಇಂದು ಬೇಂದ್ರೆ ಸಂಸ್ಮರಣೆ
ಲಕ್ಷ್ಮೇಶ್ವರ: ರಾಮಗಿರಿಯ ವರಕವಿ ಡಾ. ದ.ರಾ. ಬೇಂದ್ರೆ ಸಾಹಿತ್ಯ ವೇದಿಕೆಯ 13ನೇ ವರ್ಷಾಚರಣೆಯ ಅಂಗವಾಗಿ ಬೇಂದ್ರೆಯವರ ಎಂದೂ ಮರೆಯದ ಹಾಡುಗಳ ಸಂಸ್ಮರಣೆ ಕಾರ್ಯಕ್ರಮವು ಜ. 31ರ ಸಂಜೆ 5.30ಕ್ಕೆ ಪಟ್ಟಣದ ಹೊಸ ಬಸ್ ನಿಲ್ದಾಣದ ಹತ್ತಿರದ ಶಿಕ್ಷಕಿ ಪ್ರಮಿಳಾ ಸಾಂಗ್ಲೀಕರ್ ನಿವಾಸದಲ್ಲಿ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಪ್ರಮೀಳಾ ಸಾಂಗ್ಲೀಕರ್ ವಹಿಸುವರು. ಡಾ. ಎಂ.ಬಿ. ಪಾಟೀಲ, ನರೇಗಲ್ಲಿನ ಎಸ್.ಎ. ಕಾಲೇಜ್ ಕನ್ನಡ ಪ್ರಾಧ್ಯಾಪಕ ಪ್ರೊ. ಸಿ.ಜಿ. ಹುಡೇದಗಡ್ಡಿ, ಸಾಹಿತಿ ಕೆ.ಎಂ. ಸುಂಕದ ಆಗಮಿಸುವರು. ಹಾಗೂ ಎಸ್.ವಿ. ತಮ್ಮನಗೌಡರ ಬೇಂದ್ರಯವರ ಭಾವಗೀತೆಗಳನ್ನು ಪ್ರಸ್ತುತ ಪಡಿಸುವರು ಎಂದು ವೇದಿಕೆಯ ಕಾರ್ಯದರ್ಶಿ ಆರ್.ಎಸ್. ಯಲಬುರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

