ಗದಗ

ಪ್ರಾಚೀನ ಶಿಕ್ಷಣ ಪದ್ಧತಿ ಆದರ್ಶಮಯ: ಹೊಂಬಾಳಿ

Published On :

ಗದಗ: ನಮ್ಮ ಪ್ರಾಚೀನ ಭಾರತದ ಶಿಕ್ಷಣ ಪದ್ಧತಿಯು ಅನೇಕ ಶಾಸ್ತ್ರ ಕಲೆಗಳನ್ನು ಬೋಧಿಸುತ್ತಿದ್ದು, ಅಂದಿನ ಗುರುಕುಲ ವ್ಯವಸ್ಥೆಯಲ್ಲಿ ಶಿಷ್ಯರಿಗೆ ಎಲ್ಲ ಬಗೆಯ ವಿದ್ಯೆ ಬೋಧಿಸಿ, ವಿದ್ಯಾ ಪಾರಂಗತರನ್ನಾಗಿ ಮಾಡುತ್ತಿದ್ದರು. ಹಾಗಾಗಿ ಪ್ರಾಚೀನ ಭಾರತದ ಶಿಕ್ಷಣ ಪದ್ಧತಿ ಆದರ್ಶಮಯವಾಗಿತ್ತು ಎಂದು ಹುಲಕೋಟಿ ಕೆ.ಎಚ್. ಪಾಟೀಲ ಯೋಗ ಹಾಗೂ ನೈಸರ್ಗಿಕ ಚಿಕಿತ್ಸಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಸತೀಶ ಹೊಂಬಾಳಿ ಹೇಳಿದರು.
ಈಚೆಗೆ ಅವರು ತಾಲೂಕಿನ ಹುಲಕೋಟಿ ಗ್ರಾಮದ ಗದಗ ಸಹಕಾರಿ ಜವಳಿ ಗಿರಣಿಯ ಸ್ವತಂತ್ರ ಪಪೂ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾ   ಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾ. ವಿ.ವೈ.ಹರ್ಲಾಪುರ, ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಕಾರ್ಯದರ್ಶಿ ವಿ.ವಿ. ಪಾಟೀಲ, ಕಾಲೇಜಿನ ಶೈಕ್ಷಣಿಕ ಸಲಹಾ ಮಂಡಳಿಯ ಚೇರ್‌ಮನ್ ಡಿ.ಬಿ. ಓದುಗೌಡರ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ 2013ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ತುತ್ತಮ ಸಾಧನೆ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸ    ಲಾಯಿತು.
ಸುಮಿತ್ರಾ ತೆರಗುಂಟಿ ಪರಿಚಯಿಸಿದರು. ಅಶ್ವಿನಿ ಹಾವಣ್ಣವರ ಸ್ವಾಗತಿಸಿದರು. ಪ್ರಿಯಾಂಕಾ ಹಿರೇಮಠ ಹಾಗೂ ಸುಷ್ಮಾ ಚಿಟ್ಟಿ ನಿರೂಪಿಸಿದರು. ಮೈಲಾರಪ್ಪ ಗುಡೇನಕಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.