ಗದಗ

ಆರೋಗ್ಯವಂತ ಸಮಾಜ ನಿರ್ಮಿಸಲು ಕರೆ

Published On :

ಮುಂಡರಗಿ: ಹದಿಹರೆಯದಲ್ಲಿ ಮಕ್ಕಳು ಶೀಘ್ರಗತಿಯಲ್ಲಿ ಬೆಳವಣಿಗೆ ಹೊಂದುವುದರಿಂದ ಪೌಷ್ಟಿಕಾಂಶಗಳ ಕೊರತೆಯಿಂದಾಗಿ ರಕ್ತ ಹೀನತೆಯಿಂದ ಬಳಲುತ್ತಾರೆ. ಆದ್ದರಿಂದ ಭಾರತ ಸರ್ಕಾರವು ಡಬ್ಲೂ.ಐ.ಈ.ಎಸ್. ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, ಆರೋಗ್ಯವೇ ಭಾಗ್ಯವಾಗಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಹೇಳಿದರು.
ಅವರು ಬುಧವಾರ ಪಟ್ಟಣದ ಜೆ.ಟಿ. ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂಡರಗಿ ಸಂಯುಕ್ತವಾಗಿ ತಾಲೂಕು ಮಟ್ಟದ 6ನೇ ತರಗತಿಯಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಕಬ್ಬಿಣಾಂಶ ಮಾತ್ರೆಗಳನ್ನು ವಿತರಿಸುವ (ಡಬ್ಲೂ.ಐ.ಈ.ಎಸ್.) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ರಕ್ತ ಹೀನತೆಯಿಂದ ನರಳುವುದರಿಂದ ಅವರ ಮನಸ್ಸನ್ನು ಕೇಂದ್ರೀಕರಿಸುವುದಕ್ಕೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ತೊಂದರೆಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಈ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದರು. ಅಧ್ಯಕ್ಷತೆಯನ್ನು ಭುವನೇಶ್ವರಿ ವಿದ್ಯಾವರ್ಧಕ ಸಮಿತಿ ಅಧ್ಯಕ್ಷ ಡಿ.ಜಿ. ಹಿರೇಮಠ ವಹಿಸಿದ್ದರು. ಪುರಸಭೆ ಸದಸ್ಯೆ ದಾನೇಶ್ವರಿ ಭಜಂತ್ರಿ ಅತಿಥಿಯಾಗಿ ಪಾಲ್ಗೊಂಡಿದ್ದರು. ತಾಲೂಕು ಪ್ರಭಾರಿ ಆರೋಗ್ಯಾಧಿಕಾರಿ ಡಾ. ಎಂ.ಎಂ. ಸೊಲ್ಲಾಪುರ ಉಪನ್ಯಾಸ ನೀಡಿದರು. ಡಾ. ರವಿಶಂಕರ ಹಾಗೂ ಮುಂಡರಗಿ ತಾಲೂಕಿನ ಎಲ್ಲಾ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾ ಯರು ಉಪಸ್ಥಿತರಿದ್ದರು. ಎಸ್.ಐ. ಪರಪ್ಪನವರ ಸ್ವಾಗತಿಸಿದರು. ಎನ್.ಬಿ. ಅಳವುಂಡಿ ನಿರೂಪಿಸಿದರು. ಎಸ್.ಟಿ. ಶಿಂಪಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.