ಗದಗ

ನಾಳೆ ಪಕ್ಷಾತೀತ ಹೋರಾಟ ವೇದಿಕೆ ವಾರ್ಷಿಕೋತ್ಸವ

Published On :

ಲಕ್ಷ್ಮೇಶ್ವರ: ಶಿರಹಟ್ಟಿ ತಾಲೂಕು ಪಕ್ಷಾತೀತ ಹೋರಾಟ ವೇದಿಕೆಯ 8ನೇ ವಾರ್ಷಿಕೋತ್ಸವ ಸಮಾರಂಭವು ಜು. 20ರಂದು ಸಂಜೆ 5 ಗಂಟೆಗೆ ಪಟ್ಟಣದ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ನೆರವೇರಲಿದೆ.   ತಾಲೂಕಿನ ವ್ಯಾಪ್ತಿಯಲ್ಲಿ 8 ವರ್ಷಗಳಿಂದ ರೈತರ ಪರವಾಗಿ ಅನೇಕ ಹೋರಾಟಗಳನ್ನು ಹಮ್ಮಿಕೊಳ್ಳುತ್ತಾ ರೈತರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ರೈತರ ಬೀಜ, ಗೊಬ್ಬರ, ಸಾಲಮನ್ನಾ, ಬೆಳೆ ವಿಮೆ ಇತ್ಯಾದಿಗಳ ಬಗ್ಗೆ ಸರ್ಕಾರದ ಗಮನ ಹರಿಸುವ ನಿಟ್ಟಿನಲ್ಲಿ ವೇದಿಕೆಯು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈಗ ವೇದಿಕೆಯು 8 ವರ್ಷಗಳನ್ನು ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದ್ದು, ಅಂದು ಅನೇಕ ರೈತಪರ ಘೋಷಣೆಗಳನ್ನು ಮಾಡುವ ವಿಚಾರವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಪಟ್ಟಣದ ಪುರಸಭೆಯ ನೂತನ ಸದಸ್ಯರ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮೇಲುಕೋಟೆಯ ಶಾಸಕ ಹಾಗೂ ರೈತ ಹೋರಾಟಗಾರ ಕೆ.ಎಸ್. ಪುಟ್ಟಣ್ಣಯ್ಯ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಹಾಗೂ ಕಾರ್ಯದರ್ಶಿ ಪದ್ಮರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.