ಗದಗ

ತಡೆಹಿಡಿದ ಪದನ್ನೋತಿ ಮಂಜೂರಿಗೆ ಒತ್ತಾಯ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 19
ತಡೆಹಿಡಿದ 10, 15, 20 ವರ್ಷಗಳ ಪದನ್ನೋತಿಗಳನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರಿಗೆ ಈಚೆಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪಪೂ ಮಹಾವಿದ್ಯಾಲಯಗಳ ನೌಕರರ ಸಂಘದ ಗೌರವ ಅಧ್ಯಕ್ಷ ಪ್ರಾ. ಎಸ್.ವಿ. ಸಂಕನೂರ ಮಾತನಾಡಿ, 8 ವರ್ಷಗಳಿಂದ ರಾಜ್ಯದ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಅನುದಾನರಹಿತ ಅವಧಿಯನ್ನು ಪರಿಗಣಿಸಿ 10, 15, 20 ವರ್ಷಗಳ ಪದನ್ನೋತಿ ಹಾಗೂ ಸ್ಥಗಿತ ವೇತನ ಬಡ್ತಿ ನಿರಾಕರಿಸಿದ್ದುಂಟು. ಈ ಕಾರಣದಿಂದ 4 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಅನ್ಯಾಯವಾಗಿದೆ. ಆದರೆ, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸಿಬ್ಬಂದಿಗೆ ಅನುದಾನ ರಹಿತ ಅವಧಿಯನ್ನು ಪರಿಗಣಿಸಿ ಪದನ್ನೋತಿ ನೀಡುತ್ತಿದ್ದು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ಎಲ್ಲ ಸಿಬ್ಬಂದಿಗೂ ಈ ಸೌಲಭ್ಯ ನೀಡಬೇಕಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಅನುದಾನೇತರ ಅವಧಿಯನ್ನು ಪರಿಗಣಿಸಿ ಪದನ್ನೋತಿ, ನಿವೃತ್ತಿ ವೇತನ ಮುಂತಾದ ಎಲ್ಲ ಸೌಲಭ್ಯಗಳನ್ನು ನೀಡುವಂತೆ ತೀರ್ಪು ನೀಡಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಗಿರುವುದು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕಿಮ್ಮನೆ ರತ್ನಾಕರ, ಆಗಸ್ಟ್ ತಿಂಗಳಲ್ಲಿ ಇಲಾಖೆ ಅಧಿಕಾರಿಗಳ ಹಾಗೂ ಸಂಘಟನೆಗಳ ಪದಾಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಪಪೂ ಮಹಾವಿದ್ಯಾಲಯಗಳ ನೌಕರರ ಸಂಘದ ಕಾರ್ಯಾಧ್ಯಕ್ಷ ಪ್ರಾ. ಲಿಂಗಯ್ಯ ಹಿರೇಮಠ ಹಾಗೂ ಅಧ್ಯಕ್ಷ ಎ.ಎಸ್.ಪಾಟೀಲ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.