ನಗರಕ್ಕಿಂದು ಹೊರಟ್ಟಿ
ಗದಗ: ವಿಪ ಸದಸ್ಯ ಬಸವರಾಜ ಹೊರಟ್ಟಿ ಜು. 20ರಂದು ನಗರದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಗ್ಗೆ 10.30ಕ್ಕೆ ಪಂ. ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ರಾಜ್ಯಮಟ್ಟದ ಅಂಗವಿಕಲ ಮಕ್ಕಳ ಶಿಕ್ಷಕರ ಬೃಹತ್ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡುವರು. ಮಧ್ಯಾಹ್ನ 12ಕ್ಕೆ ವಿದ್ಯಾದಾನ ಸಮಿತಿ ಆವರಣದಲ್ಲಿ ನಡೆಯುವ ಅವ್ವ ಸೇವಾ ಟ್ರಸ್ಟ್ ಅಭಿಮಾನಿ ಬಳಗದ ಸಭೆ ನೇತೃತ್ವ ವಹಿಸುವರು. ಮಧ್ಯಾಹ್ನ 2.30ಕ್ಕೆ ಮುಂಡರಗಿಯಲ್ಲಿ ತಾಲೂಕು ಮಾಧ್ಯಮಿಕ ಶಾಲೆ ನೌಕರರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಸವರಾಜ ಹೊರಟ್ಟಿ ಅಭಿಮಾನಿಗಳ ಸಭೆ ಇಂದು
ಗದಗ: ಅವ್ವ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ, ವಿಪ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜು. 20ರ ಮಧ್ಯಾಹ್ನ 12ಕ್ಕೆ ವಿದ್ಯಾದಾನ ಸಮಿತಿಯ ಬಿ.ಇಡಿ. ಕಾಲೇಜು ಸಭಾಂಗಣದಲ್ಲಿ ಅವ್ವ ಸೇವಾ ಟ್ರಸ್ಟ್ ಅಭಿಮಾನಿಗಳ ಸಭೆ ಏರ್ಪಡಿಸಿದೆ ಎಂದು ಬಸವಪ್ರಭು ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಧಾರವಾಡ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಆ. 10ರಂದು ಬೆಳಗಾವಿ ವಿಭಾಗ ಮಟ್ಟದ ಪ್ರತಿಭಾವಂತ ಅಂಧ ವಿಕಲಚೇತನ ಎಸ್ಸೆಸ್ಸೆಲ್ಸಿ, ಪಿಯುಸಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪುರಸ್ಕಾರ ಸಮಾರಂಭ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಮುಖ ನಿರ್ಣಯ ಕೈಗೊಳ್ಳಲು ಹೊರಟ್ಟಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗುವುದು. ಗದಗ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಧೀರೇಂದ್ರ ಹುಯಿಲಗೋಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಾ. ಬಸವರಾಜ ಧಾರವಾಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

