25ಕ್ಕೆ ಹಿಂದೂ ಮಹಾಸಭೆ ಸಮ್ಮೇಳನ
ಕನ್ನಡಪ್ರಭ ವಾರ್ತೆ, ಗದಗ, ಜು. 19
ಅಖಿಲ ಭಾರತ ಹಿಂದೂ ಮಹಾಸಭೆಯ ರಾಜ್ಯಮಟ್ಟದ ಕಾರ್ಯಕರ್ತರ ಒಂದು ದಿನದ ಸಮ್ಮೇಳನ ಕೊಪ್ಪಳ ಜಿಲ್ಲೆಯ ಗಂಗಾವತಿಯ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಜು.25ರಂದು ಬೆಳಗ್ಗೆ 10ಕ್ಕೆ ನಡೆಸಲು ರಾಜ್ಯ ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಶ್ರವಣಕುಮಾರ ರಾಯ್ಕರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಸಮಾವೇಶದಲ್ಲಿ ಹಿಂದುಗಳ ಪರ್ಯಾಯ ರಾಜಕೀಯ ಶಕ್ತಿಯ ಬಲವರ್ಧನೆಯ ಕುರಿತು ಚರ್ಚಿಸಲಾಗುವುದು. ಅಂದಿನ ಸಭೆಯಲ್ಲಿ ಹಿಂದೂ ಸಮಾಜದ ಸಂಘಟನೆ ಮತ್ತು ಸಮಸ್ಯೆಗಳ ಬಗ್ಗೆ ಚರ್ಚಿಸುವುದಲ್ಲದೇ ಸಂಘಟನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಹಾಗೂ ರಾಜ್ಯ ಕಾರ್ಯಕಾರಣಿ ರಚನೆಯ ಕುರಿತು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಸಮ್ಮೇಳನದಲ್ಲಿ ಪಾಲ್ಗೊಳ್ಳುವವರು ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ಸಂಚಾಲಕ ವಿನೀತಕುಮಾರ ಜಗತಾಪ (9945297288) ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

