ಇಂದು ಉಪನ್ಯಾಸ
ಗದಗ: ತಾಲೂಕು ಪಂಚಾಯಿತಿ ಆವರಣದಲ್ಲಿ ಜು. 20ರಂದು ಸಂಜೆ 6 ಗಂಟೆಗೆ ಸಾಹಿತ್ಯ ಸಂಜೆ ಕಾರ್ಯಕ್ರಮ ಜರುಗಲಿದೆ. ನರೇಗಲ್ಲಿನ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಿ.ಜಿ. ಹುಡೇದಗಡ್ಡಿ ಅವರು 'ಹರಿಹರನ ರಗಳೆ' ಕುರಿತು ಉಪನ್ಯಾಸ ನೀಡಲಿದ್ದಾರೆ. ಗದುಗಿನ ಹಿರಿಯ ಕವಿ ಸಾಹಿತಿ ಶರಣಪ್ಪ ಹೊಸಂಗಡಿ ಕಾವ್ಯವಾಚನ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ. ಶಿವಣ್ಣ ಕುರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಅಜೀವ ಸದಸ್ಯರು, ಸಾಹಿತ್ಯಾಭಿಮಾನಿಗಳು, ಶಾಲಾ-ಕಾಲೇಜುಗಳ ಶಿಕ್ಷಕ, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕಸಾಪ ಜಿಲ್ಲಾ ಕೋಶಾಧ್ಯಕ್ಷ ಡಿ.ಎಚ್. ಮಲ್ಲೇಶ, ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನೌಕರರ ಸಭೆ
ಮುಂಡರಗಿ: ಮುಂಡರಗಿ ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಭೆಯನ್ನು ಜು. 20ರಂದು ಮಧ್ಯಾಹ್ನ 2.30ಕ್ಕೆ ಪಟ್ಟಣದ ತೋಂಟದಾರ್ಯ ಸಿಬಿಎಸ್ಸಿ ಶಾಲೆಯಲ್ಲಿ ಆಯೋಜಿಸಲಾಗಿದೆ. ಮುಂಡರಗಿ ತಾಲೂಕು ಅಧ್ಯಕ್ಷ ಪ್ರಾ. ಶಿವಾನಂದ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಭೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗಮಿಸಲಿದ್ದು, ತಾಲೂಕು ಮಾಧ್ಯಮಿಕ ಶಾಲಾ ನೌಕರರ ಜ್ವಲಂತ ಸಮಸ್ಯೆಗಳು ಹಾಗೂ ಸಂಘದ ಬಲವರ್ಧನೆ, ಪದಾಧಿಕಾರಿಗಳ ಆಯ್ಕೆ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಇಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಕಡೆಗಣನೆ: ಆರೋಪ
ಲಕ್ಷ್ಮೇಶ್ವರ: ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನು ಆಯ್ಕೆಗೊಳಿಸುವಲ್ಲಿ ಶಿರಹಟ್ಟಿ ಮತ್ತು ಮುಂಡರಗಿ ಭಾಗದ ಬಿಜೆಪಿಯ ಯಾವೊಬ್ಬ ಮುಖಂಡರನ್ನಾಗಲಿ, ನಿಷ್ಠಾವಂತ ಕಾರ್ಯಕರ್ತರನ್ನಾಗಲಿ ಆಹ್ವಾನಿಸದೇ ಏಕಪಕ್ಷೀಯವಾಗಿ ನಿರ್ಣಯ ತೆಗೆದುಕೊಂಡಿರುವುದಾಗಿ ಲಕ್ಷ್ಮೇಶ್ವರ ಬಿಜೆಪಿ ಮುಖಂಡ ಚಂಬಣ್ಣ ಬಾಳಿಕಾಯಿ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಕ್ಷದ ಅಧ್ಯಕ್ಷರನ್ನು ಆಯ್ಕೆಗೊಳಿಸುವ ಸಂದರ್ಭದಲ್ಲಿ ಜಿಲ್ಲೆಯ ಮುಖಂಡರನ್ನು, ಕಾರ್ಯಕರ್ತರನ್ನು ಸಂಪರ್ಕಿಸಬೇಕು. ಈಚೆಗೆ ಗದಗನಲ್ಲಿ ಕರೆದ ಸಭೆಯಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಹೆಸರನ್ನು ಪ್ರಸ್ತಾಪಿಸಿರುವ ಕುರಿತು ಪತ್ರಿಕೆಗಳಲ್ಲಿ ತಿಳಿದು ಬಂದಿದೆ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಹೇಳಿದರು. ಕೇವಲ ಕೆಲವರು ಸೇರಿ ಉದ್ದೇಶಪೂರ್ವಕವಾಗಿ ಯಾರೋ ಒಬ್ಬರ ಹೆಸರನ್ನು ಅಧ್ಯಕ್ಷಗಿರಿಗೆ ಪ್ರಸ್ತಾಪಿಸುವುದು ಸರಿಯಲ್ಲ, ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದರು. ಇದು ಪಕ್ಷದಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತದೆ. ಆದ್ದರಿಂದ ಜಿಲ್ಲಾ ಮಟ್ಟದ ಸಭೆಯಲ್ಲಿ ಎಲ್ಲ ಹಿರಿಯ ಮುಖಂಡರನ್ನು, ಕಾರ್ಯಕರ್ತರನ್ನು ಆಹ್ವಾನಿಸಿ ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಬ್ಬಿಣಾಂಶ ಮಾತ್ರೆ ವಿತರಣೆ ಉತ್ತಮ ಕಾರ್ಯ: ಮಲ್ಲೇಶ
ಗದಗ: ಮಕ್ಕಳು ಕಬ್ಬಿಣಾಂಶ ಕೊರತೆಯಿಂದ ಅಪೌಷ್ಟಿಕತೆ, ರಕ್ತಹೀನತೆ, ದೈಹಿಕ ಮತ್ತು ಮಾನಸಿಕ ಒತ್ತಡ ಮಂದಗತಿಯ ಕಲಿಕೆ ಸಾವು-ನೋವು ಹೆಚ್ಚುತ್ತಿದ್ದು, ಇದರ ನಿವಾರಣೆಗಾಗಿ ಸರ್ಕಾರ 6ರಿಂದ 19 ವರ್ಷ ವಯಸ್ಸಿನ ಎಲ್ಲ ಮಕ್ಕಳಿಗೆ ಕಬ್ಬಿಣಾಂಶಯುಕ್ತ ಮಾತ್ರೆ ನೀಡುತ್ತಿರುವುದು ಉತ್ತಮ ಕಾರ್ಯ ಎಂದು ಪ್ರಧಾನ ಶಿಕ್ಷಕ ಡಿ.ಎಚ್. ಮಲ್ಲೇಶ ಹೇಳಿದರು.
ಈಚೆಗೆ ಅವರು ತಾಲೂಕಿನ ಅಡವಿಸೋಮಾಪುರ ಸಣ್ಣ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಬ್ಬಿಣಾಂಶ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಲಕ, ಶಿಕ್ಷಕ ಮತ್ತು ಸಮಾಜ ಮಕ್ಕಳ ಆರೋಗ್ಯದತ್ತ ಕಾಳಜಿವಹಿಸಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ನೀಡುವ ಕಬ್ಬಿಣಾಂಶ (ಪೋಲಿಕ್ ಅಸಿಡ್), ವಿಟಾಮಿನ್-ಎ ಮತ್ತು ಅಲ್ಬೆಂಡಜೊಲ್ ಮಾತ್ರೆಗಳನ್ನು ನೀಡುವ ಯೋಜನೆಯ ಲಾಭವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಎಸ್ಡಿಎಂಸಿ ಸದಸ್ಯ ಶೇಖಪ್ಪ ನಾಯಕ, ರಾಮಜೀ ಪವಾರ, ಗೋಪಣ್ಣ ಲಮಾಣಿ, ವಾಸಪ್ಪ ಲಮಾಣಿ, ಪೋಮಪ್ಪ ರಾಠೋಡ, ಸೋಮಪ್ಪ ರಾಠೋಡ, ಲಕ್ಷ್ಮಣ ಜಂಪಣ್ಣ, ಪಾಂಡಪ್ಪ ಲಮಾಣಿ, ಶಾಲಾ ಶಿಕ್ಷಕ ಎಲ್.ವಿ. ನಂದೆಪ್ಪನವರ, ಎಸ್.ಟಿ. ಹಳಕಟ್ಟಿ, ಪಿ.ಬಿ. ಕಿಲಬನವರ, ದಾನಮ್ಮ ಲಮಾಣಿ, ಗಂಗವ್ವ ಲಮಾಣಿ, ದೇವಕ್ಕ ಲಮಾಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

