ಗದಗ

ಸಾಲಮನ್ನಾ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ

Published On :

ನರಗುಂದ: ರಾಜ್ಯದಲ್ಲಿ 3 ವರ್ಷದಿಂದ ಭೀಕರ ಬರಗಾಲ ಇರುವುದರಿಂದ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ಅವರು ಭಾನುವಾರ ಹುತಾತ್ಮ ರೈತ ಈರಪ್ಪ ಕಡ್ಲಿಕೋಪ್ಪ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ, ನಂತರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಈ ರಾಜ್ಯವನ್ನು ಹೆಚ್ಚು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಆಳಿದೆ. ಈ ಸರ್ಕಾರ ಇಷ್ಟು ವರ್ಷಗಳಲ್ಲಿ ರೈತರಿಗೆ ಏನೂ ಮಾಡದೇ, ಕೇವಲ ತಮ್ಮ ವೋಟ್ ಬ್ಯಾಂಕ್‌ಗಾಗಿ ರೈತರನ್ನು ಬಳಸಿಕೊಳ್ಳುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು. ಕಳಸಾ-ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಮಾತನಾಡಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಳಸಾ ಬಂಡೂರಿ-ಹೋರಾಟ ಸಮಿತಿ ಒಂದಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ಕೂಡಿಕೊಂಡಿದ್ದೇವೆ ಎಂದರು. ಎಚ್.ಆರ್. ಬಸವರಾಜಪ್ಪ, ಅನಸೂಯಮ್ಮ, ಬೆಳಗಾವಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವರಾಜ ಮಳಲಿ ಮಾತನಾಡಿದರು.
ರಾಜ್ಯದಲ್ಲಿ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಪ್ರತಿ ಗ್ರಾಮದಲ್ಲಿ ಚಳವಳಿ ಪ್ರಾರಂಭ ಮಾಡಲು ರೈತ ನಾಯಕರು ತೀರ್ಮಾನ ತೆಗೆದುಕೊಂಡರು. ಕೋಲಾರ, ಬಾಗಲಕೋಟೆ, ಬೈಲಹೊಂಗಲ, ತುಮಕೂರ, ಬಿಜಾಪುರ ಇನ್ನೂ ಬೇರೆ ಜಿಲ್ಲೆಗಳಿಂದ ಸಾವಿರಾರು ರೈತರು, ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.