ಗದಗ

10 ದಿನದಲ್ಲಿ ಮಳೆ ಬಾರದಿದ್ದರೆ ಗದಗ ಜಿಲ್ಲೆಗೆ ಮತ್ತೆ ಬರದ ಛಾಯೆ

Published On :

ಗದಗ: ಸಮರ್ಪಕ ಮಳೆ ಬಾರದೇ ಗದಗ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಇನ್ನು 10 ದಿನಗಳಲ್ಲಿ ಮಳೆಯಾಗದಿದ್ದಲ್ಲಿ ಜಿಲ್ಲೆಯಲ್ಲಿ ಮತ್ತೊಮ್ಮೆ ಬರದ ಛಾಯೆ ಆವರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ದಿನಗಳಿಂದ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೇ ಇರುವುದರಿಂದ ರೈತ ಸಮೂಹ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲೆಯ ಬಹುತೇಕ ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದರೂ, ಮಳೆಯಾಗುತ್ತಿಲ್ಲ. ವಾಡಿಕೆಯಂತೆ ಜಿಲ್ಲೆಯಲ್ಲಿ 71 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈಗ ಕೇವಲ 21 ಮಿ.ಮೀ. ಮಳೆಯಾಗಿದೆ. ಇದರಿಂದ ರೈತರು ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದರು.  
ಬರದ ಸಿದ್ಧತೆಗೆ ಸೂಚನೆ: ಮಳೆಯಾಗದೇ ಇದ್ದಲ್ಲಿ ರೈತರಿಗೆ ಸೂಕ್ತ ನೆರವು ನೀಡುವ ಯೋಜನೆಗೆ ಬೇಕಾದ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಡಿಸಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಎನ್ಆರ್ಇಜಿ ಯೋಜನೆ ಮೂಲಕ ಜಿಲ್ಲೆಯಲ್ಲಿ ಕಾಮಗಾರಿಗಳನ್ನು ನಡೆಸಲು ಬೇಕಾದ ಸಿದ್ಧತೆ ಕೈಗೊಳ್ಳುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇನ್ನೂ ಕೆಲವು ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಕೊಳ್ಳದೇ ಇರುವುದು ಗಮನಕ್ಕೆ ಬಂದಿದ್ದು, ಹೀಗಾಗಿ ಕಡ್ಡಾಯವಾಗಿ ಜಿಲ್ಲೆಯ ಎಲ್ಲ ರೈತರು ಬೆಳೆ ವಿಮೆ ಮಾಡಿಸುವಂತೆ ತಿಳಿ ಹೇಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.