ಗದಗ

ಬಿಸಿಯೂಟಕ್ಕೆ ಗುಣಮಟ್ಟದ ಅಕ್ಕಿ ಪೂರೈಸಲಿ

Published On :

ಗದಗ: ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಉತ್ತಮ ಗುಣಮಟ್ಟದ ಅಕ್ಕಿ ಪೂರೈಸಿದರೆ ಬಿಹಾರದ ಶಾಲೆಯಲ್ಲಿ ನಡೆದಂಥ ಘಟನೆಗಳನ್ನು ತಡೆಯಲು ಸಾಧ್ಯವೆಂದು ರಾಜ್ಯ ಅಕ್ಷರ ದಾಸೋಹ ನೌಕರರ ಫೆಡರೇಷನ್ (ಸಿಐಟಿಯು) ರಾಜ್ಯ ಉಪಾಧ್ಯಕ್ಷೆ ಬಿ. ಮಹದೇವಮ್ಮ ಅಭಿಪ್ರಾಯ ಪಟ್ಟರು.
ಅವರು ಭಾನುವಾರ ನಗರದ ಗುರುಭವನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಅಕ್ಷರ ದಾಸೋಹ ನೌಕರರ ಫೆಡರೇಷನ್(ಸಿಐಟಿಯು) ಗದಗ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಪೂರಕವಾಗಿ ಪ್ರತಿಯೊಂದು ಮಗುವೂ ಶಿಕ್ಷಣ  ಪಡೆಯಬೇಕು. ರಾಜ್ಯದ ಶಾಲೆಗಳಲ್ಲಿನ ಮಕ್ಕಳಿಗೆ ಬಿಸಿಯೂಟವನ್ನು 90 ಸಾವಿರ ಮಹಿಳೆಯರು ಬಡಿಸುತ್ತಿದ್ದಾರೆ. ಬೆಂಕಿ ಮುಂದೆ ಕೆಲಸ ಮಾಡುವ ಈ ಮಹಿಳೆಯರಿಗೆ ಭದ್ರತೆ, ಕನಿಷ್ಠ ಕೂಲಿ ಇಲ್ಲದಿರುವುದು ವಿಷಾದನೀಯ. ಈ ಯೋಜನೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಸುಮಾರು 30 ಸಾವಿರ ಮಹಿಳೆಯರು ಕೆಲಸ ಕಳೆದುಕೊಂಡಿದ್ದಾರೆ ಎಂದರು.
ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಸ್. ಹಡಪದ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ವಿಠ್ಠಲ ನಾಯ್ಕ, ಮಹೇಶ ಹಿರೇಮಠ ಮಾತನಾಡಿದರು. ಸಮ್ಮೇಳನದ ಅಧ್ಯಕ್ಷತೆಯನ್ನು ನಿರ್ಮಲಾ ದೊಡ್ಡಮನಿ ವಹಿಸಿದ್ದರು. ಸಂಘದ ಜಿಲ್ಲಾಧ್ಯಕ್ಷ ಯಶೋದಾ ಬೆಟಗೇರಿ ಉಪಸ್ಥಿತರಿದ್ದರು. ಶೋಭಾ ನರಗುಂದ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.