ಗದಗ

ಸುದ್ದಿ ಸಂಕ್ಷೇಪ

Published On :

ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ವರದಾನ
ರೋಣ: ಸರ್ಕಾರದ ಮಹತ್ವದ ಯೋಜನೆಯಾದ ಅನ್ನಭಾಗ್ಯ ಯೋಜನೆಯು ರಾಜ್ಯದ ಬಡಜನತೆಯ ಪಾಲಿಗೆ ವರದಾನವಾಗಿದೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ ಹೇಳಿದರು. ಅವರು ಭಾನುವಾರ ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರೋಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಂಗು ನವಲಗುಂದ, ಗ್ರಾಪಂ ಅಧ್ಯಕ್ಷ ಈರಪ್ಪ ಬಸಒಡೆಯರ, ಅಡಿವೆಪ್ಪ ಖಂಡೆಪ್ಪಗೌಡ್ರ, ಶರಣಪ್ಪ ಹತ್ತಿಕಟಗಿ, ಬಸವರಾಜ ಯರಗೊಪ್ಪ, ರವಿ ಪಾಟೀಲ, ಹನಮಂತ ರಜಪೂತ ಇದ್ದರು. ಆರ್.ಬಿ. ಕೊಣ್ಣೂರ ಸ್ವಾಗತಿಸಿದರು. ಬಿ.ಎಸ್. ಹಂಡಿ ನಿರೂಪಿಸಿದರು. ಎಸ್.ಐ. ಕೊಣ್ಣೂರ ವಂದಿಸಿದರು.
ಜಿಲ್ಲಾ ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಗದಗ: ಜಿಲ್ಲೆಯಲ್ಲಿ ಆಯ್ಕೆ ಮಾಡಿದ 10 ಗ್ರಾಮೀಣ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿಯನ್ನು ನೀಡಲಾಗುವುದು. 1-4-2012 ರಿಂದ 31-3-2013ರ ವರೆಗೆ ಕ್ರೀಡಾ ಫೆಡರೇಶನ್‌ಗಳು, ಭಾರತೀಯ ಕ್ರೀಡಾ ಪ್ರಾಧಿಕಾರ, ಸ್ಕೂಲ್ ಗೇಮ್ಸ್ ಆಫ್ ಫೆಡರೇಶನ್ ಮತ್ತು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೂಲಕ ಏರ್ಪಡಿಸಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಸಾಧನೆ ಮಾಡಿ ಪದಕಗಳನ್ನು ಪಡೆದ ಗ್ರಾಮೀಣ ಕ್ರೀಡಾಪಟುಗಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ರಹವಾಸಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿಯಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ, ದೃಢೀಕರಿಸಿದ ಎಲ್ಲ ದಾಖಲೆಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಜು. 31 ರೊಳಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಇವರ ಕಾರ್ಯಲಯಕ್ಕೆ ಸಲ್ಲಿಸುವಂತೆ ತಿಳಿಸಿದ್ದಾರೆ.
ಆಯ್ಕೆ ಪಟ್ಟಿ ಪ್ರಕಟ
ಗದಗ: 2013-14ನೇ ಸಾಲಿನ ಡಿಇಡಿ, ಡಿಪಿಇಡಿ ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟುಗಳ ಅಂತಿಮ ಆಯ್ಕೆ ಪಟ್ಟಿಯನ್ನು ಡಯಟ್, ಕಳಸಾಪುರ ರಸ್ತೆ, ಗದಗ ಇಲ್ಲಿ ಪ್ರಕಟಿಸಲಾಗಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಹಂಚಿಕೆಯಾದ ಸಂಸ್ಥೆ ಒಪ್ಪಿಗೆಯಾದಲ್ಲಿ ಎಲ್ಲ ಮೂಲ ದಾಖಲೆಗಳನ್ನು ಜು. 25 ರೊಳಗೆ ಸಲ್ಲಿಸಿ ದಾಖಲಾತಿ ಪಡೆದುಕೊಳ್ಳುವಂತೆ ಡಯಟ್ ಪ್ರಾಚಾರ್ಯ ಬಿ.ಎಸ್. ರಘುವೀರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.