ಗ್ರಾಮಲೆಕ್ಕಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ
ಗಜೇಂದ್ರಗಡ: ಸಮೀಪದ ಗೌಡಗೇರಿ, ವದೇಗೊಳ, ಜಿಗೇರಿ ಗ್ರಾಮ ವ್ಯಾಪ್ತಿಯ ರೈತರ ಆಸ್ತಿ ಖಾತೆ ಬದಲಾವಣೆಗಾಗಿ ರೈತರಿಂದ ಸುಲಿಗೆ ನಡೆಸಿರುವ ಗ್ರಾಮ ಲೆಕ್ಕಾಧಿಕಾರಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಈಚೆಗೆ ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗಜೇಂದ್ರಗಡದ ವಿಶೇಷ ತಹಸೀಲ್ದಾರ್ ಸಿ.ಎಂ. ಕಲಹಾಳ ಅವರಿಗೆ ಮನವಿ ಸಲ್ಲಿಸಿದರು.
ಈ ಮೂರು ಗ್ರಾಮಗಳ ರೈತರಿಗೆ ಸಂಬಂಧಿಸಿದ ಆಸ್ತಿ ಹಕ್ಕು ಖಾತೆ ಬದಲಾವಣೆಗೆ ಸರ್ಕಾರವು ನಿಗದಿಪಡಿಸಿದ ಶುಲ್ಕಕ್ಕಿಂತ ಅಧಿಕ ಹಣವನ್ನು ಗ್ರಾಮ ಲೆಕ್ಕಾಧಿಕಾರಿ ಎ.ಆರ್. ಶಾಂತಗೇರಿ ಪಡೆಯುತ್ತಿದ್ದಾರೆ. ಸಮರ್ಪಕ ಮಳೆಯಿಲ್ಲದೇ ತೊಂದರೆ ಅನುಭವಿಸುತ್ತಿರುವ ರೈತರಿಗೆ ಸರ್ಕಾರವು ನಿಗದಿ ಪಡಿಸಿದ ಹಣವನ್ನು ನೀಡುವುದೇ ಕಷ್ಟಕರವಾಗಿರುವ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಹಣವನ್ನು ಸುಲಿಗೆ ಮಾಡಲಾಗುತ್ತಿದ್ದು, ಇದು ಪ್ರಜಾತಂತ್ರ ವ್ಯವಸ್ಥೆಗೆ ಎಸಗಿರುವ ಘೋರ ಅಪಚಾರವಾಗಿದೆ. ಕಾರಣ ಈ ಕೂಡಲೇ ಇಂತಹ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದರು.
ರಫಿಕ ತೊರಗಲ್, ಹನುಮಂತ ಲಕ್ಕಲಕಟ್ಟಿ, ರಾಜು ಕಲಾಲ, ಈರಣ್ಣ ಯಂಕಂಚಿ, ಮಲ್ಲಪ್ಪ ಜೂಚನಿ, ಚಂದ್ರು ಪಾಟೀಲ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

