ರಸ್ತೆಯಲ್ಲಿ ಕೊಳಚೆ: ದುರ್ನಾತ
ಗಜೇಂದ್ರಗಡ: ಸಮೀಪದ ಲಕ್ಕಲಕಟ್ಟಿ ಅಳೆ ಬಸವೇಶ್ವರ ಗುಡಿ ಮುಂದಿನ ಗ್ರಾಮ ಮುಖ್ಯ ರಸ್ತೆಗೆ ಚರಂಡಿ ವ್ಯವಸ್ಥೆ ಇಲ್ಲದೇ ಮನೆಯಿಂದ ಹರಿದು ಬರುವ ಗಲೀಜು ರಸ್ತೆ ಮೇಲೆ ನಿಂತು ಸಾಂಕ್ರಾಮಿಕ ರೋಗಗಳ ತಾಣವಾಗಿ ಮಾರ್ಪಟ್ಟಿದೆ.
ಸರ್ಕಾರ ಗ್ರಾಮ ಶುಚಿತ್ವ ಕಾಪಾಡಲು ಹಾಗೂ ಗ್ರಾಮಸ್ಥರ ಆರೋಗ್ಯ ರಕ್ಷಣೆ, ನೈರ್ಮಲ್ಯಕ್ಕಾಗಿ ಗ್ರಾಪಂ ಮೂಲಕ ರು. ಲಕ್ಷಾಂತರ ಹಣ ವೆಚ್ಚ ಮಾಡುತ್ತಿದೆ. ಅಂಥ ಯೋಜನೆಗಳು ಫಲ ವಾಸ್ತವವಾಗಿ ಜನತೆಗೆ ತಲುಪಿಲ್ಲ ಎಂಬುದಕ್ಕೆ ಈ ಗ್ರಾಮ ಚಿತ್ರಣ ಸಾಕ್ಷಿಯಾಗಿವೆ ಎಂದು ನಿವಾಸಿಗಳು ದೂರುತ್ತಾರೆ.
ಗ್ರಾಮದ ಕೆಲ ಓಣಿಯ ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದರಿಂದ ಕೊಳಚೆ ನೀರು ರಸ್ತೆಗೆ ನುಗ್ಗಿ ದುರ್ನಾತ ಹರಡುತ್ತಿದೆ. ರಸ್ತೆಯಲ್ಲಿ ಹರಿಯುವ ಗಲೀಜು ನೀರಿನಿಂದ ನಿತ್ಯ ಮೂಗು ಮುಚ್ಚಿಕೊಂಡು ನಡೆದಾಡುವ ದುಸ್ಥಿತಿ ಜನತೆಗೆ ಎದುರಾಗಿದೆ. ಇಷ್ಟಾದರೂ ಗ್ರಾಮ ಪಂಚಾಯಿತಿ ಸದಸ್ಯರು ಸ್ವಚ್ಛತೆಗೆ ಆದ್ಯತೆ ನೀಡದೇ ತೆಪ್ಪಗೆ ಕುಳಿತಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಾರೆ.
ಸಾಂಕ್ರಾಮಿಕ ಕಾಯಿಲೆ ಭೀತಿ: ಗ್ರಾಮದ ಬಹುತೇಕ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಇದರಿಂದ ಸಂಚಾರಕ್ಕೂ ಸಂಚಕಾರವನ್ನುಂಟು ಮಾಡಿದೆ. ರಸ್ತೆ ಮಧ್ಯ ಎಲ್ಲೆಂದರಲ್ಲಿ ಕೆಸರು ತುಂಬಿದ ನೀರು ನಿಂತಿದ್ದರಿಂದ ಸೊಳ್ಳೆಗಳು ವ್ಯಾಪಕವಾಗಿ ಹರಡಿವೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೇ ಜನವಸತಿ ಪ್ರದೇಶದಲ್ಲಿ ಕಲ್ಮಶಗೊಂಡ ಚರಂಡಿ ನೀರು ನಿಲ್ಲುವುದರಿಂದ ಸಾಂಕ್ರಾಮಿಕ ಕಾಯಿಲೆಗಳ ಭೀತಿಯಲ್ಲಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಇದೆ. ಹಲವಾರು ತಿಂಗಳಿಂದ ಸೃಷ್ಟಿಯಾಗಿರುವ ಇಂಥ ವ್ಯವಸ್ಥೆಗೆ ಶಾಶ್ವತ ಪರಿಹಾರ ಇಲ್ಲವೇ ಎನ್ನುವ ಪ್ರಶ್ನೆ ನಿವಾಸಿಗಳದ್ದಾಗಿದೆ. ಇದು ಜನರ ಆರೋಗ್ಯದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತಿದ್ದು, ಮಲಿನ ನೀರು ಹರಿದು ಹೋಗಲು ಗಟಾರು ನಿರ್ಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

