ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ನರಗುಂದ: ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿ ಸಂಗನಗೌಡ ಪಾಟೀಲ ಸಾರ್ವಜನಿಕರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಂದ ಸಾರ್ವಜನಿಕರ ಹಲವಾರು ಅರ್ಜಿಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿನ ಲೋಪಗಳ ಕುರಿತೇ ಹೆಚ್ಚಾಗಿದ್ದವು. ಇದನ್ನು ಪರಿಶೀಲಿಸಿದ ಅಧಿಕಾರಿ ಸಂಬಂಧಪಟ್ಟ ಸಿಬ್ಬಂದಿಯನ್ನು ಕರೆಯಿಸಿ, ಕೂಡಲೇ ಸರಿಪಡಿಸುವಂತೆ ಸೂಚಿಸಿದರು.
ಕೊಣ್ಣೂರ ಗ್ರಾಮದ ಬ್ಲಾಕ್ ನಂ. 18 ವಿಭಾಗದ ಹಳ್ಳಿಕೇರಿ ಮಡ್ಡಿಯ ಹತ್ತಿರ ಕಾಲುವೆ ದುರಸ್ತಿಗೆ ಮಂಜೂರಾಗಿರುವ ಹಣವನ್ನು ಬೇರೆ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎನ್ನುವ ಮತ್ತೊಂದು ಅರ್ಜಿ ಬಂದಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇದೇ ಗ್ರಾಮದ ಫಗೀರಬಿ ನದಾಫ್ರವರು ವೈಯಕ್ತಿಕ ಸಮಸ್ಯೆ ಕುರಿತು ಲೋಕಾಯುಕ್ತರಿಗೆ ದೂರು ನೀಡಿದರು. ಪ್ರಕಾಶ ಹಿರೇಮನಿ, ಶಿವರಾಜ ಕಿತ್ತೂರ, ಮಾರಪ್ಪ ಮಾದರ, ಬಸವರಾಜ ಪೂಜಾರ, ಪಿ.ಜಿ. ಚವಾದಿ, ಶಿವಯೋಗಿ ಗುಡಿಸಲಮನಿ, ಕಸ್ತೂರಿ ದೊಡಮನಿ, ಉಮೇಶ ಕೋಲಿ, ದತ್ತಾತ್ರೇಯ ಹಿರೇಕೊಪ್ಪ, ಶ್ರೀಕಾಂತ ಜೋಗಣ್ಣವರು, ಲೋಕಾಯುಕ್ತ ಕಚೇರಿ ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

