ಗದಗ

ಜನಸಂಖ್ಯೆ ತಡೆಗೆ ಜಾಗೃತಿ ಅವಶ್ಯ

Published On :

ಶಿರಹಟ್ಟಿ: ಬಡತನ, ಅಜ್ಞಾನ, ಮಾಹಿತಿ ಕೊರತೆ, ಮೂಢನಂಬಿಕೆ, ಬಾಲ್ಯವಿವಾಹ, ಅನಕ್ಷರತೆ ಜನಸಂಖ್ಯೆ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಗುರುವಾರ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮಕ್ಕು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ತಾಪಂ, ತಾಲೂಕು ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜ ಇವರ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಟ್ಟಳೆಗಳಿಲ್ಲ. ಬರೀ ಘೋಷಣೆಗಳಿವೆ. ಪ್ರಸ್ತುತ ದಿನಗಳಲ್ಲಿ ಜನಸಂಖ್ಯೆ ಹೆಚ್ಚಳದಿಂದ ದೇಶದ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗುತ್ತಿದೆ. ಜತೆಗೆ ಆಹಾರ, ಬಟ್ಟೆ, ವಸತಿ, ಬಡತನ, ನಿರುದ್ಯೋಗ ಸಮಸ್ಯೆ, ಸಾಂಕ್ರಾಮಿಕ ರೋಗಗಳ ಪ್ರಮಾಣ ಹೆಚ್ಚುತ್ತಿದೆ. ಸಾಮಾಜಿಕ ಅಸಮಾನತೆ ಮುಂತಾದ ಸಮಸ್ಯೆಗಳು ಉದ್ಬವಿಸುತ್ತಿದ್ದು, ಜನರಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವುದು ಬಹಳ ಅಗತ್ಯ ಎಂದು ಹೇಳಿದರು.
ಉಪನ್ಯಾಸಕಿ ಪ್ರಿಯಾ ಬೊಮ್ಮಯ್ಯನವರ ಮಾತನಾಡಿ, ದೇಶದ ಆರ್ಥಿಕ, ಸಾಮಾಜಿಕ, ಆರೋಗ್ಯ ಮತ್ತು ಕೃಷಿ ಶಕ್ತಿಗಿಂತ ಜನಶಕ್ತಿ ಅಧಿಕವಾದರೆ ದೇಶಕ್ಕೆ ಮಾರಕ. ಜನಸಂಖ್ಯಾ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಕೌಟುಂಬಿಕ ನೆಲೆಯಲ್ಲಿ ಈ ಬಗ್ಗೆ ವಿಶೇಷ ಅರಿವು ಹಾಗೂ ಕಾಳಜಿ ಇರಬೇಕು. ಚಿಕ್ಕ ಕುಟುಂಬ ಸುಖೀ ಕುಟುಂಬ ಎಂಬ ನೀತಿ ಪಾಲಿಸಬೇಕು. ಮನೆಗೊಂದು ಮಗು, ಆ ಮಗುವನ್ನು ದೇಶದ ಮತ್ತು ಸಮಾಜದ ಸಂಪತ್ತಾಗಿ ಬೆಳೆಸಬೇಕು ಎಂದರು.
ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಪಂ ಸದಸ್ಯೆ ನಿರ್ಮಲಾ ಬರದೂರ, ಕಮಲವ್ವ ಸಜ್ಜನರ, ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಎಂ.ಜೆ. ನಿರ್ವಾಣಿ, ವೈ.ಬಿ. ಕುರಹಟ್ಟಿ, ತಾಲೂಕು ಆರೋಗ್ಯಾಧಿಕಾರಿ ಶ್ರೀಕಾಂತ ಕಾಟೇವಾಲೆ, ಡಾ. ಬಸವರಾಜ ಹಳ್ಳೆಮ್ಮನವರ, ಬಿ.ಎಂ. ನಾವಳ್ಳಿ, ಎಂ.ಎಸ್. ಸಜ್ಜನರ, ಇಂದಿರಾ ಚಿಂಚಲಿ, ಆರ್.ವಿ. ಗೂರಮ್ಮನವರ ಇದ್ದರು. ಎಸ್.ಡಿ. ಬಮ್ಮನಹಳ್ಳಿ ಸ್ವಾಗತಿಸಿದರು. ಕಸ್ತೂರಿ ಬಮ್ಮನಹಳ್ಳಿ ನಿರೂಪಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.