ಮಗುವಿನ ಚಿಕಿತ್ಸೆಗೆ ಹಣ
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ವಿದ್ಯಾರ್ಥಿನಿ ಭವ್ಯಾ ಓಲಿ ಕಳೆದ ಕೆಲ ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲಿದ್ದು, ಜ್ವರದ ಪರಿಣಾಮದಿಂದ ಸಂಪೂರ್ಣ ಶ್ರವಣ ಶಕ್ತಿಯನ್ನೇ ಕಳೆದುಕೊಂಡಿದ್ದಾಳೆ.
ಈ ಕುರಿತು ಜೂ. 26ರಂದು 'ಕನ್ನಡಪ್ರಭ' ವಿವರವಾದ ವರದಿಯನ್ನು ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಸಾರ್ವಜನಿಕರು ಮಗುವಿನ ಚಿಕಿತ್ಸೆಯ ನೆರವಿಗೆ ಧಾವಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಶಿಕ್ಷಣ ಇಲಾಖೆ ಹಾಗೂ ಅಲ್ಲಿನ ಸಿಬ್ಬಂದಿ ಹೆಚ್ಚಿನ ಧನ ಸಹಾಯ ಮಾಡಿದ್ದಾರೆ. ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರುಡಿ ವೈಯಕ್ತಿಕವಾಗಿ ಹಾಗೂ ತಾಲೂಕಿನ ಶಿಕ್ಷಕ, ಶಿಕ್ಷಕಿಯರಿಂದ ಸಂಗ್ರಹವಾದ ರು. 65 ಸಾವಿರ ನೀಡಿದ್ದು, ಮಗುವಿನ ಚಿಕಿತ್ಸೆಗೆ ಸಹಕಾರಿಯಾಗಿದ್ದಾರೆ. ಇನ್ನು ವರದಿ ಗಮನಿಸಿದ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ವೈಯಕ್ತಿಕ ಧನ ಸಹಾಯ ಹಾಗೂ ಹೆಚ್ಚಿನ ಚಿಕಿತ್ಸೆಯನ್ನು ಸರ್ಕಾರ ಹಣದಲ್ಲಿ ಮಾಡಿಸುವ ಭರವಸೆ ನೀಡಿದ್ದಾರೆ. ಹಣ ನೀಡಿದ ಶಿರಹಟ್ಟಿ ತಾಲೂಕಿನ ಶಿಕ್ಷಕ, ಶಿಕ್ಷಕಿಯರಿಗೆ, ಶಾಸಕರಿಗೆ ಮಗುವಿನ ತಂದೆ ಯಲ್ಲಪ್ಪ ಓಲಿ ಹಾಗೂ ಕುಟುಂಬ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

