ಗದಗ

ಬಸವಣ್ಣ ವಚನ ಸಾಹಿತ್ಯ ಬೆಳೆಯಲಿ

Published On :

ಕನ್ನಪ್ರಭ ವಾರ್ತೆ, ನರಗುಂದ, ಜು. 26
ಕನ್ನಡ ನಾಡಿನಲ್ಲಿ 12ನೇ ಶತಮಾನದಲ್ಲಿ ವಚನ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣವರ ವಚನ ಸಾಹಿತ್ಯ ಇಂದಿನ ಆಧುನಿಕ ಯುಗದಲ್ಲಿ ಹೆಚ್ಚು ಬೆಳೆದರೆ ಸಮಾಜ ಸುಧಾರಣೆಗೊಳ್ಳಲು ಸಾಧ್ಯ ಎಂದು ತಾಲೂಕು ಬಸವ ಕೇಂದ್ರದ ಅಧ್ಯಕ್ಷ ಸಿ.ಎಚ್. ಕೋರಿ ಅಭಿಪ್ರಾಯಪಟ್ಟರು.
ಈಚೆಗೆ ಅವರು ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ 216ನೇ ಮಾಸಿಕ ಶಿವಾನುಭವ ನಿಮಿತ್ತ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ 133ನೇ ಜಯಂತಿ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
12ನೇ ಶತಮಾನದಲ್ಲಿ ಬಸವಣ್ಣವರು ರಚನೆ ಮಾಡಿದ ವಚನ ಸಾಹಿತ್ಯದಲ್ಲಿ ಸರಳತೆ, ಸಮಾನತೆ, ಲಿಂಗಬೇಧ, ಜಾತಿಬೇದ ಅಳಿಸಿ ನುಡಿದಂತೆ ನಡೆದು ತೋರಿಸಿದರು. ಇವರ ವಚನ ಸಾಹಿತ್ಯವನ್ನು 1923ರಲ್ಲಿ ಮುದ್ರಿಸಿ ಲೋಕಾರ್ಪಣೆ ಮಾಡಿದ ಡಾ. ಫ.ಗು. ಹಳಕಟ್ಟಿಯವರು ಹಲವಾರು ರಂಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವರು ನಮಗೆಲ್ಲ ಆದರ್ಶರಾಗಿದ್ದಾರೆ ಎಂದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಸಿ.ಜಿ. ಕಂಠಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಆರ್ಶೀವಚನ ನೀಡಿದರು. ಎಂ.ಡಿ. ಸಂಕ್ರಿ ಹಾಗೂ ಪ್ರೊ. ಹುಲಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷೆ ಪಾರವ್ವ ಐನಾಪುರ, ಪ್ರೊ. ಆರ್.ಬಿ. ಚಿನವಾಲರ, ವೈ.ಆರ್. ಬಸಿಡೋಣಿ, ಎಸ್.ಬಿ. ಹುದ್ಲಿ, ವಿನೋದಾ ಐ.ಎಸ್, ಮಂಜುನಾಥ ಕಾಟಾಪುರ, ಎಸ್.ಎನ್. ಹಿರೇಕುಂಬಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.