ಸ್ವಾವಲಂಬಿಯನ್ನಾಗಿಸುವ ಶಿಕ್ಷಣ ಅವಶ್ಯ: ಹಿರೇಮಠ
ಗದಗ: ಪ್ರಚಲಿತ ಶಿಕ್ಷಣ ಪದ್ಧತಿಯು ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸಬೇಕಿದೆ ಎಂದು ನಿವೃತ್ತ ಕೃಷಿ ಪ್ರಾಧ್ಯಾಪಕ ಡಾ. ಕೆ.ಸಿ. ಹಿರೇಮಠ ಹೇಳಿದರು.
ಅವರು ಗುರುವಾರ ಸ್ಥಳೀಯ ಕರ್ನಾಟಕ ವಿದ್ಯಾವರ್ಧಕ ಸಮಿತಿ ಅಳವಂಡಿ, ಜ. ಪಂಚಾಚಾರ್ಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ದಿನಗಳ ಪೌರತ್ವ ತರಬೇತಿ ಶಿಬಿರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇಲ್ಲಿ ಕಲಿಯುತ್ತಿರುವ ಪ್ರಶಿಕ್ಷಣಾರ್ಥಿಗಳು ಶ್ರಮವಹಿಸಿ, ಅಭ್ಯಶಿಸುವ ಮೂಲಕ ಮಹಾವಿದ್ಯಾಲಯದ ಹಾಗೂ ಪಾಲಕರ ಶ್ರಮಕ್ಕೆ ಪ್ರತಿಫಲ ನೀಡುವಲ್ಲಿ ಶ್ರಮಿಸಬೇಕು. ಪ್ರತಿಯೊಬ್ಬರಿಗೂ ಸರ್ಕಾರಿ ನೌಕರಿಯು ಸಿಗುವುದು ಕಷ್ಟ. ಅದಕ್ಕಾಗಿ ಸ್ವಾವಲಂಬಿ ಉದ್ಯೋಗ ಕೈಗೊಳ್ಳಲು ಮುಂದಾಗಬೇಕು. ಪ್ರಚಲಿತ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಸ್ವಾವಲಂಬಿಯನ್ನಾಗಿಸಬೇಕು ಎಂದರು. ಉದ್ಘಾಟನೆ ನೆರವೇರಿಸಿದ ಮಹಾವಿದ್ಯಾಲಯದ ಕಾರ್ಯದರ್ಶಿ ರೇವಣಸಿದ್ಧೇಶ್ವರಸ್ವಾಮಿ ಹಿರೇಮಠ ಓದಿದವರೆಲ್ಲ ನಿಜವಾದ ನಾಗರಿಕರಲ್ಲ. ಸಹಕಾರ ಮನೋಭಾವನೆ, ವಿವೇಚನೆ, ಒಳ್ಳೆಯ ನಡವಳಿಕೆ ಹೊಂದಿದವರು ಮಾತ್ರ ಉತ್ತಮ ನಾಗರಿಕರು ಎಂದರು. ಜ. ಪಂಚಾಚಾರ್ಯ ಶಿಕ್ಷಣ ಮಹಾವಿದ್ಯಾಲಯದ ಸ್ಥಾನಿಕ ಸಮಿತಿಯ ಚೇರಮನ್ ಬಸಣ್ಣ ಮಲ್ಲಾಡದ, ಶಿಬಿರದ ಕಾರ್ಯದರ್ಶಿ ಹರ್ಷಾ ವಿ. ಮಾತನಾಡಿದರು. ಸಾನ್ನಿಧ್ಯವಹಿಸಿದ್ದ ಸಿದ್ಧಲಿಂಗ ಶಿವಾಚಾರ್ಯರು ಆಶೀರ್ವಚನ ನೀಡಿದರು. ಶಿಕ್ಷಣ ಮಹಾವಿದ್ಯಾಲಯದ ಆಡಳಿತಾಧಿಕಾರಿ ಪಿ.ಕೆ. ಒಡೆಯರ, ಸ್ಥಾನಿಕ ಸಮಿತಿಯ ಸದಸ್ಯ ಮಲ್ಲಿಕಾರ್ಜುನ ಶಿಗ್ಲಿ, ಅಜ್ಜಣ್ಣ ಮುಧೋಳ, ಟಿ.ಸಿ. ಅರಳಲಿಮಠ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

