ಗದಗ

ಬೆಳೆವಿಮೆ ಹಣ ಪಾವತಿ: ರೈತರಿಗೆ ಸಲಹೆ

Published On :

ಗದಗ: 2013-14ನೇ ಸಾಲಿಗಾಗಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ತಾಲೂಕಿನ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಹೋಬಳಿಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ.
ಅರ್ಹ ರೈತರು ಬೆಳೆವಿಮೆಯಲ್ಲಿ ಭಾಗವಹಿಸಲು ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರಿಗೆ ಜು. 31 ಕೊನೆಯ ದಿನವಾಗಿದ್ದು, ಬೆಳೆಸಾಲ ಪಡೆಯದ ರೈತರು ವಿಮಾ ಹಣವನ್ನು ತಮಗೆ ಸಂಬಂಧಿಸಿದ ಬ್ಯಾಂಕ್‌ನಲ್ಲಿ ಪಾವತಿ ಮಾಡಬಹುದು.  ರೈತರಿಗೆ ಅನುಕೂಲತೆ ಕಲ್ಪಿಸುವ ಸಲುವಾಗಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಗದಗ ಇವರ ಮುಖಾಂತರವು ಪಾವತಿ ಮಾಡಬಹುದಾಗಿದೆ.
ತಾಲೂಕಿನ ರೈತರ ಅನುಕೂಲಕ್ಕಾಗಿ ಈ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ ಅಧಿಕಾರಿಗಳು ಜು. 30 ಹಾಗೂ 31ರಂದು 2 ದಿನ ಮಾತ್ರ ಸಹಾಯಕ ಕೃಷಿ ನಿರ್ದೇಶಕರು, ಶಿರಹಟ್ಟಿ ಇವರ ಕಚೇರಿಯಲ್ಲಿ ವಿಮಾ ಹಣವನ್ನು ಭರ್ತಿ ಮಾಡಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಿದ್ದು, ಕಾರಣ ರೈತರು ವಿಮಾ ಹಣ ಪಾವತಿಗೋಸ್ಕರ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ವಿಮಾ ಕಂತಿನ ಹಣವನ್ನು ಪಾವತಿಸಬಹುದಾಗಿದೆ.
ಸಂಬಂಧಿಸಿದ ವಿಮಾ ಬೆಳೆಗೆ ನಿಗದಿಪಡಿಸಿದ ವಿಮಾ ಕಂತಿನ ಮೊತ್ತ, ರೈತರು ತಮ್ಮ ಹೊಲದ ಖಾತೆ ಉತಾರ, ರೈತರು 1 ಭಾವ ಚಿತ್ರ, ತಮ್ಮ ಬ್ಯಾಂಕ್ ಖಾತೆಯ ಪಾಸ್‌ಬುಕ್ ಝೆರಾಕ್ಸ್, ಐ.ಎಫ್.ಎಸ್.ಸಿ. ಕೋಡ್ ಸಹಿತ, ಅರ್ಜಿ ಸಲ್ಲಿಸುವ ರೈತರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ನೀಡಬೇಕು.
ವಿಮಾ ಮೊತ್ತವನ್ನು ಜು. 30 ಹಾಗೂ 31 ರಂದು ಸಹಾಯಕ ಕೃಷಿ ನಿರ್ದೇಶಕರು, ಶಿರಹಟ್ಟಿ ಇವರ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಸ್ವೀಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.