ಕುಟುಂಬ ಯೋಜನೆ ಜಾರಿಯಾಗಲಿ: ಶ್ರೀಕಾಂತ
ನರಗುಂದ: ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹಲವಾರು ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈಗಲೇ ಕುಟುಂಬ ಯೋಜನೆ ಜಾರಿಗೆ ತರಬೇಕೆಂದು ಚಿಕ್ಕನರಗುಂದ ಪದವಿ ಪೂರ್ವ ಕಾಲೇಜ ಉಪನ್ಯಾಸಕ ಶ್ರೀಕಾಂತ ದಂಡನಾಯ್ಕ ಹೇಳಿದರು.
ಅವರು ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆ ನಂ. 1 ರಲ್ಲಿ ಈಚೆಗೆ ತಾಪಂ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಶಿಶು ಅಭಿವೃದ್ಧಿ ಇಲಾಖೆ, ಪುರಸಭೆ, ಸುವಿದಾ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಇವುಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸದ್ಯ ಪ್ರಪಂಚದ ಜನಸಂಖ್ಯೆಯಲ್ಲಿ ಮೊದಲು ಚೀನಾ, ನಂತರದ ಸ್ಥಾನದಲ್ಲಿ ಭಾರತ ಇದೆ. ಇದೇ ರೀತಿಯಲ್ಲಿ ಜನಸಂಖ್ಯೆ ಬೆಳವಣಿಗೆಯಾದಲ್ಲಿ ಸಾಕಷ್ಟು ಸಮಸ್ಯೆಯಾಗಲಿದೆ ಎಂದರು. ಡಾ. ಮರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದಲ್ಲಿ ಬಡತನ, ಅಜ್ಞಾನ, ಮಾಹಿತಿಯ ಕೊರತೆ, ಮೂಢನಂಬಿಕೆ, ಬಾಲ್ಯ ವಿವಾಹ, ಕಡಿಮೆ ಸಾಕ್ಷರತಾ ಪ್ರಮಾಣ ಕಾರಣಗಳಿಂದಾಗಿ ಜನಸಂಖ್ಯೆ ಹೆಚ್ಚಾಗುತ್ತದೆ. ಅದಕ್ಕೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡರೂ ಜನಸಂಖ್ಯೆ ನಿಯಂತ್ರಣ ಮಾಡಲಾಗುತ್ತಿಲ್ಲ. ಅದಕ್ಕೆ ಪ್ರತಿಯೊಬ್ಬರೂ ಚಿಂತನೆ ನಡೆಸಬೇಕಿದೆ. ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಪಂ ಸದಸ್ಯೆ ಶಾಂತಾ ದಂಡಿನ, ಚಂಬಣ್ಣ ವಾಳದ, ಡಾ. ಎಸ್.ಸಿ. ವಸ್ತ್ರದ, ತಾಪಂ ಅಧಿಕಾರಿ ಬಿ.ವಿ. ಪಾಟೀಲ, ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ, ಶಿಶು ಅಭಿವೃದ್ಧಿ ಅಧಿಕಾರಿ ಟಿ.ಜಿ. ಶಂಕರಮೂರ್ತಿ, ಆರೋಗ್ಯಾಧಿಕಾರಿ ರೇಣುಕಾ ಕೋರನ್ನವರ, ಸುರೇಶ ಹೊರಮನಿ, ಚಂದ್ರಶೇಖರ ಕೋಟಿ, ಗಿರಿಜಾ ಮಠಪತಿ, ಸುಕನ್ಯಾ ಸಾಲಿ, ವಿ.ಕೆ. ತಳವಾರ, ಎಸ್.ಎಂ. ಮಂಗಳಿ, ಎಂ.ಆರ್. ಕುಲಕರ್ಣಿ, ಜಿ.ವಿ. ಕೊಣ್ಣೂರ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

