ಗದಗ

ನೇತ್ರಗಳ ಸಂರಕ್ಷಣೆ ಮುಖ್ಯ: ಡಾ. ಭಜಂತ್ರಿ

Published On :

ಕನ್ನಡಪ್ರಭ ವಾರ್ತೆ, ರೋಣ, ಜು. 29
ದೇಹದ ಪ್ರಮುಖ ಅಂಗವಾದ ನೇತ್ರದ ರಕ್ಷಣೆ ಅತ್ಯಂತ ಮುಖ್ಯವಾಗಿದ್ದು, ನೇತ್ರಗಳ ಬಗ್ಗೆ ಸಂಪೂರ್ಣ ಜಾಗೃತಿ ಅಗತ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಬಿ.ಎಸ್. ಭಜಂತ್ರಿ ಹೇಳಿದರು.
ಅವರು ಭಾನುವಾರ ಪಟ್ಟಣದ ರಾಜೀವಗಾಂಧಿ ಆಯುರ್ವೇದಿಕ ಆಸ್ಪತ್ರೆಯ ಸಭಾಭವನದಲ್ಲಿ ಬಸಮ್ಮ ಸಂಗನಗೌಡ ಪಾಟೀಲ ಅವರ 9ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ನಡೆದ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಗಾಜುಬಿಂದು ಅಳವಡಿಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಕಣ್ಣಿನ ಮಹತ್ವ ತಿಳಿಯಬೇಕಾಗಿದೆ. ಕಣ್ಣಿಗೆ ಯಾವುದೇ ತೊಂದರೆಯಾದಲ್ಲಿ ನಿರ್ಲಕ್ಷ್ಯ ಮಾಡದೆ ತಕ್ಷಣವೇ ನೇತ್ರ ವೈದ್ಯರನ್ನು ಕಾಣಬೇಕು ಎಂದರು.
ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ರಾಜೀವಗಾಂಧಿ ಶಿಕ್ಷಣ ಸಂಸ್ಥೆಯು ಬಸಮ್ಮತಾಯಿವರ ಪುಣ್ಯ ಸ್ಮರಣೋತ್ಸವ ನಿಮಿತ್ತ ಪ್ರತಿ ವರ್ಷ ಉಚಿತವಾಗಿ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬರಲಾಗಿದೆ. ಇದು ಗ್ರಾಮೀಣ ಪ್ರದೇಶದ ಬಡಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ವೈದ್ಯಕೀಯ ತಂತ್ರಜ್ಞಾನಗಳಿಂದ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ನುರಿತ ತಜ್ಞ ವೈದ್ಯರಿಂದ ಕೈಗೊಳ್ಳಲಾಗುತ್ತಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಗುಲಗಂಜಿ ಮಠದ ಗುರುಪಾದ ಮಹಾಸ್ವಾಮೀಜಿ ಮಾತನಾಡಿದರು. ಡಾ. ಕೆ.ಬಿ. ದನ್ನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐ.ಎಸ್. ಪಾಟೀಲ, ಡಾ. ಎಸ್.ಬಿ. ಲಕ್ಕೋಳ, ಡಾ. ಎಲ್.ಆರ್. ರಡ್ಡೇರ, ಹುಚ್ಚಪ್ಪ ನವಲಗುಂದ, ರವಿ ದಂಡಿನ, ಡಾ. ಐ.ಬಿ. ಕೊಟ್ಟೂರಶೆಟ್ಟರ, ಡಾ. ಎಸ್.ಎ. ನೀರಲಗಿ, ಡಾ. ಎಲ್.ಡಿ. ಬಾಕಳೆ, ಮಿಥುನ್ ಪಾಟೀಲ, ಡಾ. ಆರ್.ಜಿ. ಮಲ್ಲಾಪುರ, ಪರಶುರಾಮ ಅಳಗವಾಡಿ, ದಶರಥ ಗಾಣಿಗೇರ, ಮಲ್ಲಣ್ಣ ಗಡಗಿ ಮುಂತಾದವರು ಉಪಸ್ಥಿತರಿದ್ದರು.
ವೀರಭದ್ರಗೌಡ ಪಾಟೀಲ ಸ್ವಾಗತಿಸಿದರು. ವಿ.ಬಿ. ಸೋಮನಕಟ್ಟಿಮಠ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.