ಪ್ರತಿಯೊಬ್ಬರೂ ವಿದ್ಯಾವಂತರಾದಲ್ಲಿ ದೇಶದ ಅಭಿವೃದ್ಧಿ: ಪಾಟೀಲ
ರೋಣ: ಪ್ರತಿಯೊಬ್ಬರೂ ಗುಣಮಟ್ಟದ ಶಿಕ್ಷಣ ಪಡೆದುಕೊಂಡು ವಿದ್ಯಾವಂತರಾದಲ್ಲಿ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಜಿ.ಎಸ್. ಪಾಟೀಲ ಎಂದರು.
ಅವರು ಭಾನುವಾರ ಸ್ಥಳೀಯ ಸಂಸ್ಥೆಯ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಸ್ಥಳೀಯ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ(ಆರ್ಜಿಎಸ್) ಹಾಗೂ ವಿವಿಧ ಅಂಗ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಯಾವುದೇ ಕ್ಷೇತ್ರದ ಪ್ರಗತಿಗೆ ಶಿಕ್ಷಣದ ಕಾರ್ಯ ಮುಖ್ಯವಾಗಿದೆ. ಪ್ರತಿಯೊಬ್ಬರೂ ವಿದ್ಯಾವಂತರಾದಲ್ಲಿ ದೇಶದ ಅಭಿವೃದ್ಧಿ ಎಂದರು. ಅಧ್ಯಕ್ಷತೆ ವಹಿಸಿದ್ದ ಗುಲಗಂಜಿ ಮಠದ ಗುರುಪಾದ ಶ್ರೀಗಳು ಮಾತನಾಡಿ, ಜನಪ್ರತಿನಿಧಿಗಳು ಜನತೆಗೆ ಮೂಲ ಸೌಕರ್ಯ ಒದಗಿಸುವ ಕಾರ್ಯ ಮಾಡಬೇಕು ಎಂದರು. ಡಾ. ಕೆ.ಬಿ. ಧನ್ನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ ಇಮ್ರಾಪುರ, ಡಾ. ಎಲ್.ಆರ್. ರಡ್ಡೇರ, ಐ.ಎಸ್. ಪಾಟೀಲ, ವಿ.ಆರ್. ಗುಡಿಸಾಗರ, ಮಿಥುನ್ ಪಾಟೀಲ, ಎಚ್.ಆರ್. ಮೇಟಿ, ಪ್ರಭು ಮೇಟಿ, ಆರ್.ಬಿ. ಗಿರಡ್ಡಿ, ವೀರಣ್ಣ ಶೆಟ್ಟರ, ಪರಶುರಾಮ ಅಳಗವಾಡಿ ಇದ್ದರು. ಬಿ.ಎಫ್. ಚೇಗರಡ್ಡಿ ಸ್ವಾಗತಿಸಿದರು. ಪ್ರಮೀಳಾ ತೋಟಗಂಟಿ, ಡಾ. ಪರಿಮಳಾ ದೇಶಪಾಂಡೆ ನಿರೂಪಿಸಿದರು. ಪ್ರಾಚಾ ರ್ಯ ಐ.ಬಿ. ಕೊಟ್ಟೂರಶೆಟ್ಟರ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

