ಗದಗ

ಪರಿಚಯ ಪತ್ರ ವಿತರಿಸಿ: ಮನವಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 29
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹೊರಡಿಸಿರುವ ಸುತ್ತೋಲೆ 2013ರ ಜುಲೈ 8ರಂದು ಪ್ರಕಾರ ಗದಗ-ಬೆಟಗೇರಿ ನಗರದ ಘೋಷಣೆಯಾಗಿರುವ 48 ಕೊಳಚೆ ಪ್ರದೇಶದ ಕುಟುಂಬಗಳಿಗೆ ಪರಿಚಯ ಪತ್ರ ವಿತರಿಸಬೇಕೆಂದು ಗದಗ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸ್ಲಂ ಬೋರ್ಡ್ ಅಧಿಕಾರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ನಗರದ ಕರ್ನಾಟಕ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳು ಕರೆದ ಸಭೆಯಲ್ಲಿ ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ಸರ್ಕಾರದಿಂದ ಬರುವ ಸ್ಲಂ ಪ್ರದೇಶಗಳ ಅಭಿವೃದ್ಧಿ ಅನುದಾನ ಸರಿಯಾಗಿ ಬಳಕೆಯಾಗಬೇಕು. ಅಭಿವೃದ್ಧಿಯಾಗಿರುವ ಸ್ಲಂ ಪ್ರದೇಶಗಳನ್ನು ಬಿಟ್ಟು 40-50 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಗುಡಿಸಲು ಪ್ರದೇಶಗಳಿಗೆ ಮೊದಲು ಆದ್ಯತೆ ನೀಡಬೇಕು. ಸ್ಲಂ ಬೋರ್ಡ್‌ನಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸ್ಲಂ ಜನರಿಗೆ ಮಾಹಿತಿ ನೀಡುವಂತೆ ಕೋರಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ ಮಾತನಾಡಿ, ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ ತಕ್ಷಣ ನಗರದ ಎಲ್ಲ ಘೋಷಿತ ಸ್ಲಂ ಪ್ರದೇಶಗಳ ಕುಟುಂಬಗಳಿಗೆ ಪರಿಚಯ ಪತ್ರ ವಿತರಿಸಬೇಕು. ನಗರದ ಎಲ್ಲ ಗುಡಿಸಲು ಪ್ರದೇಶಗಳ ಘೋಷಣೆ ಸರಿಪಡಿಸಬೇಕು. ರಾಜೀವ್ ಆವಾಸ್ ಯೋಜನೆಯಲ್ಲಿ ನಿಜವಾದ ಗುಡಿಸಲು ನಿವಾಸಿಗಳಿಗೆ ಪ್ರಾಮುಖ್ಯ ನೀಡಬೇಕು ಎಂದರು.
ಸಮಿತಿಯ ಅಧ್ಯಕ್ಷ ಅಶೋಕ ಮ್ಯಾಗೇರಿ ಸ್ಲಂ ಜನರ ಸಮಸ್ಯೆಗಳ ಕುರಿತು ಮಾತನಾಡಿದರು. ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಮಹಿಳಾ ಸಮಿತಿಯ ಅಧ್ಯಕ್ಷೆ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಬಸವರಾಜ ಯಡ್ಡವಣವರ, ಅಶೋಕ ಕುಸಬಿ, ಯುವ ಸಮಿತಿ ಅಧ್ಯಕ್ಷ ಅಶೋಕ ಕುಸಬಿ, ಯಲ್ಲಪ್ಪ ರಾಮಗಿರಿ, ಪರಶುರಾಮ ಕಾಳೆ, ಇಬ್ರಾಹಿಂ ಮುಲ್ಲಾ, ಅಬುಬಕ್ಕರ ಮಕಾಂದಾರ, ಅನಿಲ ಕಾಳೆ, ಬಸವರಾಜ ಕಾಳೆ, ಮಮ್ತಾಜಬೇಗಂ ಮಕಾಂದಾರ, ಮೆಹರುನ್ನಿಸಾ ಡಾಲಾಯತ ಮುಂತಾದವರು ಇದ್ದರು. ಸ್ಲಂ ಬೋರ್ಡ್ ಅಧಿಕಾರಿ ಅಶೋಕ ಬೀಳಗಿ ಮನವಿ ಸ್ವೀಕರಿಸಿ ಮಾತನಾಡಿ, ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಸ್ಲಂ ಪ್ರದೇಶಗಳ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.