ಮಕ್ಕಳ ಪ್ರತಿಭೆ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಮಹಾಂತಶೆಟ್ಟರ್
ಲಕ್ಷ್ಮೇಶ್ವರ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಬೆಳಕಿಗೆ ತರಲು ಸೂಕ್ತವಾದ ಪ್ರೇರಣೆ ಅಗತ್ಯವಾಗಿದೆ. ಪ್ರತಿ ಮಗುವಿನಲ್ಲಿ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಹೊರ ತರಲು ಅವಶ್ಯವಾಗಿರುವ ವೇದಿಕೆ ಅಗತ್ಯ ಎಂದು ಪಟ್ಟಣದ ಎಪಿಎಂಸಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ ಅಭಿಪ್ರಾಯ ಪಟ್ಟರು.
ಈಚೆಗೆ ಪಟ್ಟಣದ ಎಪಿಎಂಸಿ ವ್ಯಾಪಾರಸ್ಥರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ನೃತ್ಯ ಸ್ಪರ್ಧಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಿಮ್ಮ ಮಗುವಿನಲ್ಲಿರುವ ಪ್ರತಿಭೆ ಗುರುತಿಸುವ ಕಾರ್ಯ ಪಾಲಕರು ಮಾಡಬೇಕು. ಪಾಠದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗೆ ಅವಕಾಶ ನೀಡಬೇಕು. ದೈಹಿಕ ಶ್ರಮದ ಆಟ, ನೃತ್ಯಗಳನ್ನು ಕಲಿಸುವ ಮೂಲಕ ಮಗುವಿನ ಸರ್ವತೋಮುಖ ಬೆಳವಣಿಗೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಅಧ್ಯಕ್ಷ ಓಪ್ರಕಾಶ ಜೈನ, ಎಸ್.ಕೆ. ಕಾಳಪ್ಪನವರ, ಡಿ.ಎಚ್. ಪಾಟೀಲ, ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಎಸ್.ಪಿ. ಪಾಟೀಲ, ಲಕ್ಷ್ಮೇಶ್ವರ ಕ್ರೀಡಾ ಉತ್ತೇಜನ ಸಂಘದ ಅಧ್ಯಕ್ಷ ಚೆಂಬಣ್ಣ ಬಾಳಿಕಾಯಿ, ಎಪಿಎಂಸಿಯ ವರ್ತಕ ಸಂಘದ ಪದಾಧಿಕಾರಿಗಳು ಹಾಗೂ ವ್ಯಾಪಾರಸ್ಥರು ಅಗಮಿಸಿದ್ದರು. ಪಟ್ಟಣದ ವಿವಿಧ ಪ್ರಾಥಮಿಕ ಶಾಲೆಯ ಮಕ್ಕಳ ನೃತ್ಯ ಸ್ಪರ್ಧೆಗಳು ಆಕರ್ಷಕವಾಗಿದ್ದವು. ಈಶ್ವರ ಮೆಡ್ಲೇರಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

