ಅಂಗವಿಕಲರ ಅಭಿವೃದ್ಧಿಗೆ ರು. 307 ಕೋಟಿ
ಕನ್ನಡಪ್ರಭ ವಾರ್ತೆ, ರೋಣ, ಜು. 30
ರಾಜೀವಗಾಂಧಿ ಫೌಂಡೇಶನ್ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಸ್ಥಾಪಿಸಿದ ಸಂಸ್ಥೆಯಾಗಿದ್ದು, ಇದಕ್ಕೆ ಯುನಿಸೆಫ್ದಿಂದ ನೇರವಾಗಿ ಅನುದಾನ ಬರಲಿದೆ. ಈ ಫೌಂಡೇಶನ್ನಿಂದ ಈಗಾಗಲೇ ರಾಜ್ಯಕ್ಕೆ ರು. 307 ಕೋಟಿ ಬಿಡುಗಡೆಯಾಗಿದೆ. ಇದರ ಸದುಪಯೋಗವನ್ನು ವಿಕಲಚೇತನರು ಪಡೆದುಕೊಳ್ಳಬೇಕು ಎಂದು ಮಾಜಿ ಸಂಸದ ಆರ್.ಎಸ್. ಪಾಟೀಲ ಹೇಳಿದರು.
ಅವರು ಸೋಮವಾರ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ರೋಣ ತಾಲೂಕು ವಿಕಲಚೇತನ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಾಸಕ ಜಿ.ಎಸ್. ಪಾಟೀಲರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರು. 307 ಕೋಟಿಗಳಲ್ಲಿ ರು. 115 ಕೋಟಿ ಉತ್ತರ ಕರ್ನಾಟಕದಲ್ಲಿನ ವಿಕಲಚೇತನರ ಅಭಿವೃದ್ಧಿಗೆ ಮೀಸಲು ಇರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದಿಂದ ಸ್ಥಾಪನೆಯಾದ ರಾಜೀವಗಾಂಧಿ ಫೌಂಡೆಶನ್ ವಿಕಲಚೇತನರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಂಪೂರ್ಣ ಅಂಗವಿಕಲರಿಗೆ ತಾಲೂಕು ಮಟ್ಟದಲ್ಲಿ 100 ಮನೆಗಳನ್ನು ನಿರ್ಮಿಸಿ ವಿತರಣೆ ಮಾಡಬೇಕು. ಪ್ರತಿ ಗ್ರಾಪಂನಲ್ಲಿ 25 ಮನೆಗಳನ್ನು ವಿಕಲಚೇತನರಿಗೆ ಕಾಯ್ದಿರಿಸಬೇಕು ಎಂದು ನ್ಯಾಶನಲ್ ಹ್ಯಾಂಡಿಕಾಪ್ಟ್ ಫೌಂಡೇಶನ ಕಾರ್ಪೋರೇಶನ್ (ಎನ್.ಎಚ್.ಪಿ.ಸಿ) ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದೆ. ಸದ್ಯದಲ್ಲಿಯೇ ಮಂಜೂರಾತಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ: ಅಂಗವಿಕಲತೆ ಶಾಪವೆಂದು ಕೀಳರಿಮೆಯಿಂದ ಖಿನ್ನತೆಗೊಳಗಾಗದೇ ತಮ್ಮಲ್ಲಿರುವ ಆಗಾಧ ಸಾಮರ್ಥ್ಯವನ್ನು ಬಳಸಿ, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗಿದಲ್ಲಿ ಸಾಧಿಸಲು ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುವುದನ್ನು ತಿಳಿಯಬೇಕು. ಈಗಾಗಲೇ ಅನೇಕರು ಸಾಧಿಸಿ ತೋರಿಸಿದ್ದಾರೆ. ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ತಿಳಿದುಕೊಂಡು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಶಾಸಕ ಜಿ.ಎಸ್. ಪಾಟೀಲ ಮಾತನಾಡಿದರು. ಸಾನ್ನಿಧ್ಯವಹಿಸಿದ್ದ ಗುಲಗಂಜಿ ಮಠದ ಗುರುಪಾದ ಶ್ರೀಗಳು, ರಾಜೀವಗಾಂಧಿ ಫೌಂಡೇಶನ್ ಸದಸ್ಯ ವೀರೇಶ ತೋಟದ, ಬಸವರಾಜ ಚೋಳಚಗುಡ್ಡ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ತಾಲೂಕು ಅಧ್ಯಕ್ಷ ನಾಗಪ್ಪ ಗಡಗಿ ವಹಿಸಿದ್ದರು. ಪುರಸಭೆ ಸದಸ್ಯ ಶಫಿಕ ಮೂಗನೂರ, ದಶರಥ ಗಾಣಿಗೇರ, ಯೂಸೂಫ ಇಟಗಿ, ವಿಶ್ವನಾಥ ಜಿಡ್ಡಿಬಾಗಿಲ, ಬಸವರಾಜ ಸುಂಕದ, ವಿ.ಆರ್. ಗುಡಿಸಾಗರ, ಹುಚ್ಚಪ್ಪ ನವಲಗುಂದ, ಶಿವಾನಂದ ಗಡಗಿ, ಮಲ್ಲಣ್ಣ ಗಡಗಿ, ಗಿರೀಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಅರಗಿದ್ದಿ ಸ್ವಾಗತಿಸಿದರು. ವಿ.ಬಿ. ಸೋಮನಕಟ್ಟಿಮಠ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

