ಅವಳಿನಗರ ಅಭಿವೃದ್ಧಿಗೆ ಬದ್ಧ: ಸಚಿವ ಪಾಟೀಲ
ಕನ್ನಡಪ್ರಭ ವಾರ್ತೆ, ಗದಗ, ಜೂ. 1
ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧನಾಗಿರುವೆ. ಗದಗ-ಬೆಟಗೇರಿ ಅವಳಿ ನಗರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಶನಿವಾರ ಬೆಟಗೇರಿಯ ನರಸಾಪುರ ರಸ್ತೆಯ ಇಂಡಸ್ಟ್ರಿಯಲ್ನ ನಾಗರಾಜ ಫರ್ನಿಚರ್ಸ್ ಕಟ್ಟಡದಲ್ಲಿ ಜಿಪಂನ ಮಾಜಿ ಸದಸ್ಯ ದಿ. ಮನೋಹರ ಇನಾಮತಿ ಅವರ 56ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಹಾಗೂ ಗ್ರಾಮೀಣ ಭಾಗದ ಮೂಲ ಸೌಲಭ್ಯಗಳನ್ನು ಕ್ಷೇತ್ರಕ್ಕೆ ಒದಗಿಸುವಲ್ಲಿ ದಿ. ಮನೋಹರ ಇನಾಮತಿ ಅವರು ವಿಶಿಷ್ಟಪೂರ್ಣ ಸೇವೆ ಸಲ್ಲಿಸಿದ್ದು, ಅವರನ್ನು ಸ್ಮರಿಸುವ ಅಭಿಮಾನಿಗಳ ಕಾರ್ಯ ಅತ್ಯಂತ ಮಹತ್ವದ್ದು ಎಂದರು.
ಜಿಲ್ಲಾ ಕಾಂಗ್ರಸ್ ಘಟಕದ ಪ್ರಧಾನ ಕಾರ್ಯದರ್ಶಿ ರಾಮಣ್ಣ ರಾಂಪುರ ಮಾತನಾಡಿ, ಬಡವರ, ದೀನದಲಿತರನ್ನು, ಅಲ್ಪಸಂಖ್ಯಾತರನ್ನು ಹಾಗೂ ಹಿಂದುಳಿದವರನ್ನು ಸಮಾನ ದೃಷ್ಠಿಯಿಂದ ಕಂಡು ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗಿ, ಸಮಾಜ ಸೇವೆಯನ್ನು ತಮ್ಮ ಉಸಿರಾಗಿಸಿಕೂಂಡಿದ್ದ ದಿ. ಮನೋಹರ ಇನಾಮತಿ ಅವರ ಆದರ್ಶ ಗುಣಗಳು ಇಂದಿನ ಯುವಕರಿಗೆ ಮಾದರಿಯಾಗಿವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕೇಕ್ ಕತ್ತರಿಸುವ ಮೂಲಕ ದಿ. ಮನೂಹರ ಇನಾಮತಿ ಜನ್ಮ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೆಪಿಸಿಸಿ ಸದಸ್ಯ ವಾಸಣ್ಣ ಕುರುಡಗಿ, ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಶ್ರೀನಿವಾಸ ಕರಿ, ನಗರಸಭೆ ಮಾಜಿ ಅಧ್ಯಕ್ಷ ಶಿವಣ್ಣ ಮುಳಗುಂದ, ಗಿರಿಧರಸಿಂಗ್ ಬ್ಯಾಳಿ, ವಿಜಯ ಕಬಾಡಿ, ಶೇಖಣ್ಣ ಹಡಪದ, ಅಪ್ಪಣ್ಣ ಇನಾಮತಿ, ಅಜ್ಜಣ್ಣ ಪಾಟೀಲ, ರಮೇಶ, ರಾಜೇಶ ಕಟ್ಟಿಮನಿ ಮುಂತಾದವರು ಇದ್ದರು. ಆರ್.ಎಲ್. ಮೇಳೆನವರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

