ಮಕ್ಕಳಿಗೆ ಪಠ್ಯೇತರ ಚಟುವಟಿಕೆಯೂ ಅವಶ್ಯ: ಶಾಸಕ ದೊಡ್ಡಮನಿ
ಮುಂಡರಗಿ: ಇಂದು ಪಾಲಕರು ತಮ್ಮ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಬೇಕೆಂದು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ, ಮಕ್ಕಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳೂ ಅವಶ್ಯ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಈಚೆಗೆ ಅವರು ಪಟ್ಟಣದ ಮಹಾಗಣಪತಿ ಸಮಾಜ ಸೇವಾ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಸ್ಥಳೀಯ ಎಸ್.ಎಂ. ಭೂಮರಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 10 ದಿನಗಳ ಕಾಲ ಏರ್ಪಡಿಸಿದ್ದ ಉಚಿತ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರಿ ಅಧಿಕಾರಿ ಎಲ್.ಬಿ. ಹೊಸಳ್ಳಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಜತೆಗೆ ಮಕ್ಕಳಿಗೆ ವಿವಿಧ ವಿಷಯಗಳ ತರಬೇತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೇಸಿಗೆಯಲ್ಲಿ ವಿವಿಧ ಹಂತದ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಸೇರಿದಂತೆ ಹಲವಾರು ಯೋಜನೆ ಹಾಕಿಕೊಂಡಿರುತ್ತದೆ. ಪಾಲಕರು, ಮಕ್ಕಳು ಹಾಗೂ ಶಿಕ್ಷಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಹಾಗಣಪತಿ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಕಾಶೀನಾಥ ಬಿಳಿಮಗ್ಗದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಸುರೇಶ ಮಾಳೆಕೊಪ್ಪ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ಎಂ.ಡಿ. ಭಾವಿಮನಿ, ಎ.ಕೆ. ಸಜ್ಜನರ, ಎಂ.ಬಿ. ಕನ್ಯಾಳ, ದೇವರಾಜ ಹಡಪದ, ಅವಿನಾಶ ಗೋಡಖಿಂಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

