ಶಿಕ್ಷಕರು ಪೂರ್ವಸಿದ್ಧತೆ ಮಾಡಿಕೊಳ್ಳಲಿ: ತುರಮರಿ
ಕನ್ನಡಪ್ರಭ ವಾರ್ತೆ, ಗದಗ, ಜೂ. 3
ಶೈಕ್ಷಣಿಕ ವರ್ಷ ಪ್ರಾರಂಭದಲ್ಲಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗುವುದರ ಜತೆಗೆ ಶಿಕ್ಷಕರು ಆಯಾ ವರ್ಗದ ಪಠ್ಯ ವಿಷಯಗಳಲ್ಲಿ ಸಾಕಷ್ಟು ಪೂರ್ವತಯಾರಿ ಮಾಡಿಕೊಂಡಿರಬೇಕು. ಮಗುವಿಗೆ ಹೇಳಿದ ವಿಷಯ ನೆನಪಿನಲ್ಲಿ ಉಳಿಯುವಂತಾಗಬೇಕೆಂದು ಜಿಪಂನ ಸಿಇಓ ವೀರಣ್ಣ ತುರಮರಿ ಹೇಳಿದರು.
ಈಚೆಗೆ ಅವರು ಸ್ಥಳೀಯ ಲೋಯೋಲಾ ಪ್ರೌಢಶಾಲೆಯಲ್ಲಿ ಗದಗ ಶಹರ ಹಾಗೂ ಗ್ರಾಮೀಣ ವಲಯದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ ಸೇತುಬಂಧ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಗುವಿನಲ್ಲಿ ಶಕ್ತಿಯ ಸಾಮರ್ಥ್ಯಗಳಿವೆ. ಅವರಿಗೆ ಪ್ರೋತ್ಸಾಹ ನೀಡುವುದಾಗಬೇಕು ಎಂದರು.
ಜಿಪಂ ಆರೋಗ್ಯ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರ ಸಂಘದ ಜಿಲಾಧ್ಯಕ್ಷ ಎಸ್.ಎನ್. ಬಳ್ಳಾರಿ ಮಾತನಾಡಿ, ಶಿಕ್ಷಕರ ಸಂಘವು ಕೇವಲ ಬೇಡಿಕೆಗಳಿಗೆ ಹೋರಾಟ ಮಾಡದೇ ರಚನಾತ್ಮಕ ಕಾರ್ಯಗಳಿಗೆ ಸ್ಪಂದಿಸುತ್ತ ಬಂದಿದೆ. ಇಲಾಖೆಯ ಅಧಿಕಾರಿಗಳು ಇದಕ್ಕೆ ಪೂರಕ ವಾತಾವರಣ ಒದಗಿಸಿಕೊಟ್ಟಿದ್ದಾರೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ್ ನಾಯಕ್ ಮಾತನಾಡಿದರು.
ಗದಗ ಶಹರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ಎಸ್.ಎಸ್. ಗುಡ್ಲಾನೂರ, ಬಿಆರ್ಸಿ ಸಮನ್ವಯಾಧಿಕಾರಿ ವಿ.ವಿ. ನಡುವಿನಮನಿ, ಎಂ.ಪಿ. ಚಿಂಚೇವಾಡಿ, ಶಹರ ಅಧ್ಯಕ್ಷ ಬಿ.ಬಿ. ಕುಂದಗೋಳ ಸೇರಿದಂತೆ ವಿವಿಧ ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು. ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎಫ್. ಪೂಜಾರ ಸ್ವಾಗತಿಸಿದರು. ಸಿಆರ್ಪಿ ಶಿವಾನಂದ ಗಿಡ್ನಂದಿ ನಿರೂಪಿಸಿದರು. ಎಸ್.ಎಸ್. ಉಣ್ಣಿಮಠ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

